Kushtagi :ನರೇಗಾ ಕೂಲಿಕಾರರಿಗೆ ಮತದಾನ ಜಾಗೃತಿ ಮೂಡಿಸಿದ: ಬೇರ್‌ ಫೂಟ್‌ ಟೆಕ್ನಿಷಿಯನ್‌ ಮಾರುತಿ

ಜಾಗೀರ ಗುಡದೂರು ಗ್ರಾಮ ಪಂಚಾಯತಿಯಲ್ಲಿ ಜರುಗಿದ ಸ್ವೀಪ್‌ ಕಾರ್ಯಕ್ರಮ

 ಕುಷ್ಟಗಿ : ಶೀಘ್ರದಲ್ಲಿ ವಿಧಾನಸಭಾ ಚುನಾವಣೆ ಜರುಗುತ್ತಿದ್ದು ಕಡ್ಡಾಯವಾಗಿ ಎಲ್ಲರೂ ಮತದಾನ ಮಾಡಬೇಕೆಂದು ಜಾಗೀರ ಗುಡದೂರು ಗ್ರಾಮ ಪಂಚಾಯತ ಬೇರ್‌ ಫೂಟ್‌ ಟೆಕ್ನಿಷಿಯನ್‌ ಮಾರುತಿ ಸಾಳುಂಕೆ ಕರೆ ನೀಡಿದರು.
ಜಾಗೀರಗುಡದೂರು ಗ್ರಾಮ ಪಂಚಾಯತಿ ವತಿಯಿಂದ ಗುಡ್ಡದ ದೇವಲಾಪುರ ಗ್ರಾಮದಲ್ಲಿ ನಾಲಾ ಹೂಳೆತ್ತುವ ಕಾಮಗಾರಿ ಸ್ಥಳದಲ್ಲಿ ಸ್ವೀಪ್ ಕಾರ್ಯಕ್ರಮ ಜರುಗಿತು. ಭಾರತ ಅತಿ ದೊಡ್ಡ ಪ್ರಜಾಪ್ರಭುತ್ವ ದೇಶವಾಗಿದ್ದು, ದೇಶದಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸಲು ಎಲ್ಲಾ ಮತದಾರರು ಚುನಾವಣಾ ಪ್ರಕ್ರಿಯೆಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವುದು ಅಗತ್ಯವಾಗಿದೆ. ದೇಶದಲ್ಲಿ ಜರುಗುವ ಯಾವುದೇ ಚುನಾವಣೆಗಳಲ್ಲಿ ಮತದಾರರು ತಮ್ಮ ಹಕ್ಕನ್ನು ತಪ್ಪದೆ ಚಲಾಯಿಸಬೇಕು. ಸಂವಿಧಾನ ನಮ್ಮ ಜನಪ್ರತಿನಿಧಿಗಳನ್ನು ಆಯ್ಕೆ ಮಾಡಿಕೊಳ್ಳಲು, ಮತದಾನದ ಹಕ್ಕನ್ನು ನೀಡಿದೆ. ಮತದಾನದ ಹಕ್ಕನ್ನು ನಾವು ಚಲಾಯಿಸದಿದ್ದಲ್ಲಿ, ನಮಗೆ ನಾವೆ ವಂಚನೆ ಮಾಡಿಕೊಂಡಂತಾಗುತ್ತದೆ ಎಂದರು.
ಮತದಾರರ ಪ್ರತಿಜ್ಞಾ ವಿಧಿ ಸ್ವೀಕಾರ ಇದೇ ಸಂದರ್ಭದಲ್ಲಿ 521 ನರೇಗಾ ಕೂಲಿಕಾರರಿಗೆ ಮತದಾನದ ಪ್ರತಿ‌ಜ್ಞಾ ವಿಧಿಯನ್ನು ಬೋಧಿಸಲಾಯಿತು.
ಸದರಿ ಕಾರ್ಯಕ್ರಮದಲ್ಲಿ ಗ್ರಾಮ ಕಾಯಕ ಮಿತ್ರ ರೇಣುಕಾ ಸಾಳುಂಕೆ, ಕಾಯಕ ಬಂಧುಗಳು ಕೂಲಿಕಾರರು ಹಾಜರಿದ್ದರು.


Previous Post Next Post

AD

 


Contact For News&Ads

Siddi TV

Contact Form

f="https://unpkg.com/video.js/dist/video-js.css" rel="stylesheet">