ನಟ ಅಹಿಂಸಾ ಚೇತನ್ ಬಂಧನ: ಹಿಂದುತ್ವದ ವಿರುದ್ಧ ಕೆಟ್ಟದಾಗಿ ಪೋಸ್ಟ್
ಸಾಮಾಜಿಕ ಜಾಲತಾಣದಲ್ಲಿ ಹಿಂದುತ್ವ ಹಾಗೂ ಹಿಂದೂ ಧರ್ಮದ ವಿರುದ್ಧ ಕೆಟ್ಟದಾಗಿ ಪೋಸ್ಟ್ ಮಾಡಿಕೊಂಡಿದ್ದ ಹಿನ್ನೆಲೆಯಲ್ಲಿ ಶೇಷಾದ್ರಿಪುರ ಠಾಣೆ ಪೊಲೀಸರು ನಟ ಅಹಿಂಸಾ ಚೇತನ್ ಅವರನ್ನು ಬಂಧಿಸಿದ್ದಾರೆ.
ಬೆಂಗಳೂರು (ಮಾ.21): ಸಾಮಾಜಿಕ ಜಾಲತಾಣದಲ್ಲಿ ಹಿಂದುತ್ವ ಹಾಗೂ ಹಿಂದೂ ಧರ್ಮದ ವಿರುದ್ಧ ಕೆಟ್ಟದಾಗಿ ಪೋಸ್ಟ್ ಮಾಡಿಕೊಂಡಿದ್ದ ಹಿನ್ನೆಲೆಯಲ್ಲಿ ಶೇಷಾದ್ರಿಪುರ ಠಾಣೆ ಪೊಲೀಸರು ನಟ ಅಹಿಂಸಾ ಚೇತನ್ ಅವರನ್ನು ಬಂಧಿಸಿದ್ದಾರೆ.
ನಟ ಚೇತನ್ ಅವರನ್ನು ಬಂಧಿಸಿದ ಶೇಷಾದ್ರಿಪುರ ಠಾಣೆ ಪೊಲೀಸರು ಇಂದು ಬೆಳಗ್ಗೆ ಬಂಧಿಸಿ ಕೋರ್ಟ್ ಕರೆದೊಯ್ದರು. ಹಿಂದುತ್ವವನ್ನು ಸುಳ್ಳಿನ ಆಧಾರದ ಮೇಲೆ ಕಟ್ಟಲಾಗಿದೆ ಎಂದು ಸಾಮಾಜಿಕ ಜಾಲತಾಣ ಟ್ವಿಟರ್‌ನಲ್ಲಿ ಟ್ವೀಟ್ ಮಾಡಿಕೊಂಡು ಅದಕ್ಕೊಮದು ಫೋಟೋವನ್ನು ಕೂಡ ಹಂಚಿಕೊಂಡಿದ್ದರು. ಜೊತೆಗೆ, ಉರಿಗೌಡ ಮತ್ತು ನಂಜೇಗೌಡ ಬಗ್ಗೆ ಟ್ವೀಟ್ ಮಾಡಿಕೊಂಡಿದ್ದರು. ಇನ್ನು ಸಾಮಾಜಿಕ ಜಾಲತಾಣದಲ್ಲಿ ಟ್ವೀಟ್ ಮಾಡಿದ ಬೆನ್ನಲ್ಲೇ ಶಿವಕುಮಾರ್ ಎಂಬುವರು ಶೇಷಾದ್ರಿಪುರ ಠಾಣೆಗೆ ದೂರು ದಾಖಲಿಸಿದ್ದರು.
ಹಿಂದೂ ಭಾವನೆಗಳಿಗೆ ಧಕ್ಕೆ ತರುವ ರೀತಿಯಲ್ಲಿ ಟ್ವೀಟ್ ಮಾಡಿದ ದೂರಿನ ಬೆನ್ನಲ್ಲೇ ಈ ಬಗ್ಗೆ ಶೇಷಾದ್ರಿಪುರಂ ಪೊಲೀಸರು ಎಫ್‌ಐಆರ್ ದಾಖಲಿಸಿಕೊಂಡಿದ್ದರು. ಈ ಹಿನ್ನೆಲೆಯಲ್ಲಿ ನಟ ಚೇತನ್ ಅವರನ್ನು ಬೆಳಗ್ಗೆ ಬಂಧನ ಮಾಡಿದ ಪೊಲೀಸರು, ಬೆಂಗಳೂರಿನ ಮ್ಯಾಜಿಸ್ಟ್ರೇಟ್ ಕೋರ್ಟ್ ಮುಂದೆ ಹಾಜರುಪಡಿಸಿದ್ದಾರೆ.