KRP - ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಅರಿಕೆರೆ ಸಿ. ಕೃಷ್ಣಾರೆಡ್ಡಿಯವರನ್ನು ಘೋಷಣೆ

ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ  ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಅರಿಕೆರೆ ಸಿ. ಕೃಷ್ಣಾರೆಡ್ಡಿಯವರನ್ನು ಘೋಷಣೆ
ಇಂದು ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಸಂಸ್ಥಾಪಕರಾದ ಗಾಲಿ ಜನಾರ್ಧನ ರೆಡ್ಡಿ ಅವರು  ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರಕ್ಕೆ ಭೇಟಿ ನೀಡಿದರು.
ಕ್ಷೇತ್ರದ ಜನತೆ ಬೃಹತ್ ಬೈಕ್ ರ‍್ಯಾಲಿ, ಡೊಳ್ಳು ಕುಣಿತ, ಬೊಂಬೆ ಕುಣಿತದ ಮೂಲಕ ಆತ್ಮೀಯವಾಗಿ ಸ್ವಾಗತಿಸಿದರು. ನಂತರ ನಗರದ ವಾಲ್ಮೀಕಿ ಪ್ರತಿಮೆಗೆ ಹಾಗೂ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು.
ಬೃಹತ್ ಕಾರ್ಯಕ್ರಮದ ವೇದಿಕೆಯ ಬಾಗೇಪಲ್ಲಿ ಕ್ಷೇತ್ರದ ಸಹಸ್ರಾರು ಜನತೆಯ ಸಮ್ಮುಖದಲ್ಲಿ ಬಾಗೇಪಲ್ಲಿ ಮತಕ್ಷೇತ್ರದ ಅಭ್ಯರ್ಥಿಯಾಗಿ ಅರಿಕೆರೆ ಸಿ.ಕೃಷ್ಣಾರೆಡ್ಡಿಯವರನ್ನು ಪಕ್ಷದ ಸಂಸ್ಥಾಪಕರಾದ ಶ್ರೀ ಗಾಲಿ ಜನಾರ್ಧನ ರೆಡ್ಡಿಯವರು ಅಧಿಕೃತವಾಗಿ ಘೋಷಣೆ ಮಾಡಿದರು. ಬಾಗೇಪಲ್ಲಿಯ ಅಭಿವೃದ್ಧಿಗೆ ಭರವಸೆ ನೀಡಿದರು.
ಕಾರ್ಯಕ್ರಮದಲ್ಲಿ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಮುಖಂಡರು, ಕಾರ್ಯಕರ್ತರು, ಹಿರಿಯರು ಸೇರಿದಂತೆ ಸಾವಿರಾರು ಅಭಿಮಾನಿಗಳು ಉಪಸ್ಥಿತರಿದ್ದರು.
Previous Post Next Post

AD

 


Contact For News&Ads

Siddi TV

Contact Form

f="https://unpkg.com/video.js/dist/video-js.css" rel="stylesheet">