ಸಿಂಧನೂರು ತಾಲೂಕಿನ ತುರ್ವಿಹಾಳ ಪಟ್ಟಣದಲ್ಲಿ 2022-23ನೇ ಸಾಲಿನ ವಿಷೇಶ ಅಭಿವೃದ್ಧಿ ಯೋಜನೆ ಅಡಿಯಲ್ಲಿ ರೂ 6.11 ಕೋಟಿ ವೆಚ್ಚದಲ್ಲಿ ಸಮುದಾಯ ಆರೋಗ್ಯ ಕೇಂದ್ರ ಕಟ್ಟಡ ಹಾಗೂ ನಗರೋತ್ಪನ್ನ ಯೋಜನೆ ಅಡಿಯಲ್ಲಿ ರೂ.9 ಲಕ್ಷದಲ್ಲಿ ವಿಕಲಚೇತನರ ಭವನ ನಿರ್ಮಾಣಕ್ಕೆ ಶಾಸಕ ಆರ್ ಬಸನಗೌಡ ತುರ್ವಿಹಾಳ ಅವರು ಬುಧವಾರ ಭೂಮಿ ಪೂಜೆ ನರಶಸಿದರು.
*ಹೌದು* ನಂತರ ಮಾತನಾಡಿದ ಅವರು ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಜನಸಂಖ್ಯೆಗೆ ಅನುಗುಣವಾಗಿ ಸಮುದಾಯ ಆರೋಗ್ಯ ಕೇಂದ್ರವಾಗಿ ಮೇಲ್ದರ್ಜೆಗೇರಿಸಬೇಕು ಎಂಬುದು ಕ್ಷೇತ್ರದ ಹಳ್ಳಿಗಳ ಜನರ ಹಾಗೂ ವಿವಿಧ ಸಂಘಟನೆಗಳು ಬೇಡಿಕೆಯಾಗಿತ್ತು, ಅವರ ಬೇಡಿಕೆಯನ್ನು ಈಡೇರಿಸಿದ್ದೇನೆ ಮತ್ತು ವಿಕಲಚೇತನರ ಅನುಕೂಲಕ್ಕಾಗಿ ಸಮುದಾಯ ಭವನ ನಿರ್ಮಿಸಲಾಗುವುದು, ಹಲವು ಅಭಿವೃದ್ಧಿ ಕೆಲಸಗಳನ್ನು ಮಾಡುವ ಮೂಲಕ ಕ್ಷೇತ್ರದ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡುತ್ತಿದೆನೆ ಕಾಮಗಾರಿಯ ಸಂಬಂಧಿಸಿದ ಅಧಿಕಾರಿಗಳು ಗುಣಮಟ್ಟದ ಕಾಮಗಾರಿಯನ್ನು ನಡೆಸಬೇಕು, ನಿಗದಿತ ಸಮಯದೊಳಗೆ ಕಾಮಗಾರಿ ಪೂರ್ಣಗೊಳಿಸಬೇಕು ಹಾಗೂ ಸ್ಥಳೀಯ ಜನರು ಕುಡಾ ಸಹಕಾರ ನೀಡಬೇಕು ಎಂದು ಹೇಳಿದರು.
ಈ ಸಂದರ್ಭದಲ್ಲಿ ವಿವಿಧ ಸಂಘಟನೆಯ ಮುಖಂಡರು.ಊರಿನ ಹಿರಿಯರು ಸಾರ್ವಜನಿಕರು ಭಾಗವಹಿಸಿದ್ದರು.
ರಿಪೋರ್ಟರ್:-* ಮಹೆಬೂಬ ಮೊಮೀನ ಸಿದ್ದಿ ಟಿವಿ
Tags
ರಾಜಕೀಯ