ನಾಳೆಯಿಂದ ಎಸ್ ಎಸ್ ಎಲ್ ಸಿ ಪರೀಕ್ಷೆ : ಪರೀಕ್ಷಾ ಕೇಂದ್ರದ ಸುತ್ತ ನಿಷೇದಾಜ್ಞೆ ಜಾರಿ
ಕೊಪ್ಪಳ : ನಾಳೆಯಿಂದ (ದಿನಾಂಕ 31) ಏಪ್ರಿಲ್ 15 ವರೆಗೆ ಎಸ್ ಎಸ್ ಎಲ್ ಸಿ ಪರೀಕ್ಷೆ ನಡೆಯಲಿದ್ದು ಶಾಂತಿ, ಸುಗಮವಾಗಿ ಪರೀಕ್ಷೆ ನಡೆಯಲು ಪರೀಕ್ಷಾ ಕೇಂದ್ರದ ಸುತ್ತ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇದಾಜ್ಞೆ ಜಾರಿಗೊಳಿಸಿ ಕೊಪ್ಪಳ ಜಿಲ್ಲಾಧಿಕಾರಿ ಎಂ ಸುಂದರೇಶ್ ಬಾಬು ಅವರು ಆದೇಶ ಹೊರಡಿಸಿದ್ದಾರೆ.
ಮಾರ್ಚ್ 31 ರಿಂದ ಏಪ್ರಿಲ್ 15 ರ ವರಗೆ ಪರೀಕ್ಷೆ ನಡೆಯಲಿದ್ದು, ಪರೀಕ್ಷಾ ಕೇಂದ್ರದ ಸುತ್ತ ಬೆಳಿಗ್ಗೆ 10 ರಿಂದ ಮದ್ಯಾಹ್ನ 2 ರ ವರಗೆ ಯಾವುದೇ ಅಕ್ರಮಕ್ಕೆ ಅವಕಾಶ ಇಲ್ಲದಂತೆ ನಿಷೇದಾಜ್ಞೆ ಜಾರಿಗೊಳಿಸಲಾಗಿದೆ.
ಕೊಪ್ಪಳ ಜಿಲ್ಲೆಯಲ್ಲಿ ಒಟ್ಟು 23341 ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ. ಇದರಲ್ಲಿ 11597 ಬಾಲಕರು,11744 ಬಾಲಕಿಯರು ಇದ್ದಾರೆ.
ಕೊಪ್ಪಳ ಜಿಲ್ಲೆಯ ಗಂಗಾವತಿ, ಕೊಪ್ಪಳ, ಕುಷ್ಟಗಿ, ಯಲಬುರ್ಗಾ, ಕುಕನೂರು, ಕಾರಟಗಿ,ಕನಕಗಿರಿ ಏಳು ತಾಲೂಕಿನಿಂದ ಒಟ್ಟು 79 ಪರೀಕ್ಷಾ ಕೇಂದ್ರಗಳನ್ನು ಸ್ಥಾಪಿಸಲಾಗಿದೆ.
ಪರೀಕ್ಷಾ ಕೇಂದ್ರದ ಸುತ್ತ 200 ಮೀಟರ್ ವ್ಯಾಪ್ತಿಯಲ್ಲಿ ಯಾವುದೇ ಜೆರಾಕ್ಸ್ ಅಂಗಡಿ,ಮೊಬೈಲ್ ಅಂಗಡಿ, ಎಸ್ ಟಿ ಡಿ,ಟೈಪಿಂಗ್ ಕೇಂದ್ರಗಳಿಗೆ ನಿಷೇದ ವಿಧಿಸಲಾಗಿದೆ.
ವರದಿ: ಈರಯ್ಯ ಕುರ್ತಕೋಟಿ
Tags
ರಾಜ್ಯ