ಉಡುಪಿ: ನಗರದ ಕಲ್ಸಂಕ ಜಂಕ್ಷನ್ ಬಳಿ ಇರುವ ಪಾಳು ಬಿದ್ದ ಕಟ್ಟಡದಲ್ಲಿ ಅಪರಿಚಿತ ವ್ಯಕ್ತಿಯೊಬ್ಬರ ಮೃತದೇಹ ಅನುಮಾನಸ್ಪದವಾಗಿ ಪತ್ತೆಯಾಗಿದ ಘಟನೆ ನಡೆದಿದೆ.
ಇದು ಸುರತ್ಕಲ್ ಮೂಲದ 32 ವರ್ಷದ ವ್ಯಕ್ತಿಯ ಮೃತದೇಹ ಎನ್ನಲಾಗುತ್ತಿದೆ. ಕಟ್ಟಡದಿಂದ ಬಿದ್ದು ಮೃತಪಟ್ಟಿರುವ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದ್ದು, ವ್ಯಕ್ತಿ ಆಯ ತಪ್ಪಿ ಬಿದ್ದು ಮೃತಪಟ್ಟಿರಬಹುದೇ ಅಥವಾ ಯಾರಾದರೂ ತಳ್ಳಿ ಕೊಲೆ ಮಾಡಿರಬಹುದೇ ಎಂಬ ಆಯಾಮದಲ್ಲಿ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.
Tags
ಟಾಪ್ ನ್ಯೂಸ್