ಹುಬ್ಬಳ್ಳಿ:
ರಾಜ್ಯ ಪರಿಶಿಷ್ಟ ಸಮುದಾಯಗಳಿಗೆ ಮೀಸಲಾತಿ ಹೆಚ್ಚಿಸಿ ಹಾಗೂ ಒಳ ಮೀಸಲಾತಿ ನೀಡಿದ ರಾಜ್ಯ ಸರ್ಕಾರಕ್ಕೆ ಅಭಿನಂದನಾ ಸಮಾರಂಭಕ್ಕೆ ಹಲಗೆ ಬಾರಿಸುವ ಮೂಲಕ ಸಿಎಂ ಬಸವರಾಜ ಬೊಮ್ಮಾಯಿ ಹಾಗೂ ಬಿಜೆಪಿ ನಾಯಕರು ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಸಚಿವ ಗೋವಿಂದ್ ಕಾರಜೋಳ ಕಾಂಗ್ರೆಸ್ ಮೇಲೆ ಹರಿಹಾಯ್ದರು.
ʻಕಾಂಗ್ರೆಸ್ ಭರವಸೆ ನೀಡುವ ಮೂಲಕ ಸಮಾಜದ ಜನರ ಮುಗಿಗೆ ತುಪ್ಪ ಸವರುವ ಕಾರ್ಯ ಮಾಡುತ್ತಿದ್ದರು. ಆದರೆ ಬಿಜೆಪಿ ಸರ್ಕಾರ ತನ್ನ ಬದ್ಧತೆಯಂತೆ ಪರಿಶಿಷ್ಟ ಸಮುದಾಯರಿಗೆ ಮೀಸಲಾತಿ ಹೆಚ್ಚಿಸುವ ಕೆಲಸ ಮಾಡಿದ್ದಾರೆ. ಅದಕ್ಕೆ ಋಣ ತಿರಿಸಲು ಬರುವ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿಸಿ, ಪ್ರಧಾನಿ ಮೋದಿ ಹಾಗೂ ಸಿಎಂ ಬೊಮ್ಮಾಯಿಯವರು ಕೈ ಬಲಪಡಿಸಬೇಕುʼ ಎಂದರು.
ಕೇಂದ್ರ ಸಚಿವ ಎ.ನಾರಾಯಣ ಸ್ವಾಮಿ ಮಾತನಾಡಿ, ಕಾಂಗ್ರೆಸ್ ಸರ್ಕಾರ ಸದಾಶಿವ ಆಯೋಗದ ವರದಿಯನ್ನು ಕೇವಲ ನಾಮಕಾವಸ್ತೆ ಎಂದು ಭಾವಿಸಿತ್ತು. 40 ವರ್ಷದಿಂದ ಮಾಡದ ಕೆಲಸ ಬಿಜೆಪಿ ಮೂರು ವರ್ಷದಲ್ಲಿ ಮೀಸಲಾತಿ ನೀಡಿದೆ ಎಂದರು.
ಸಮಾರಂಭದಲ್ಲಿ ಕೇಂದ್ರಿಯ ಸಂಸದಿಯ ಮಂಡಳಿಯ ಸದಸ್ಯ ಬಿ.ಎಸ್. ಯಡಿಯೂರಪ್ಪ, ಕೇಂದ್ರ ಸಚಿವ ಪ್ರಹ್ಲಾದ ಜೋಶಿ, ಮಾಜಿ ಮುಖ್ಯ ಮಂತ್ರಿ ಜಗದೀಶ ಶೆಟ್ಟರ, ಸಚಿವರಾದ ಶಂಕರ ಪಾಟೀಲ ಮುನೇನಕೊಪ್ಪ, ಕೋಟಾ ಶ್ರೀನಿವಾಸ ಪೂಜಾರಿ, ವಿಪ ಸದಸ್ಯ ಎನ್. ರವಿಕುಮಾರ ಭಾಗವಹಿಸಿದ್ದರು.
ವರದಿ : ಬಸವರಾಜ ಕಬಡ್ಡಿ
Tags
ರಾಜಕೀಯ