Congress : ಕುಕನೂರನಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಚುನಾವಣಾ ಪ್ರಚಾರ
ಅಧಿಕಾರಕ್ಕೆ ಬಂದ ಮೇಲೆ ನೀರಾವರಿ ಯೋಜನೆ ಪೂರ್ಣಗೊಳಿಸುತ್ತೇವೆ, ಬಸವರಾಜ್ ರಾಯರಡ್ಡಿ ಅಸೆಂಬ್ಲಿಯಲ್ಲಿ ಇರಬೇಕು,
ಕುಕನೂರು : ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತೆ, ಅಧಿಕಾರಕ್ಕೆ ಬಂದ ಮೇಲೆ ಯಲಬುರ್ಗಾ,ಕೊಪ್ಪಳ ದ ನೀರಾವರಿ ಯೋಜನೆಗಳನ್ನು ಪೂರ್ಣಗೊಳಿಸುತ್ತೇವೆ, ನೆನೆಗುದಿಗೆ ಬಿದ್ದಿರುವ ನೀರಾವರಿ ಯೋಜನೆಗಳಿಗೆ ಮಂಜೂರಾತಿ ಕೊಡಿಸುತ್ತೇವೆ, ರಾಯರಡ್ಡಿ ಅನುಭವಿ, ಬುದ್ದಿವಂತ ರಾಜಕಾರಣಿ ಇಂತವರು ಅಸೆಂಬ್ಲಿಯಲ್ಲಿ ಇರಬೇಕು ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ತನ್ನಿ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಕೊಪ್ಪಳ ಜಿಲ್ಲೆಯ ಕುಕನೂರು ಪಟ್ಟಣದ ಗುರುಕುಲ ಕಾಲೇಜು ಆವರಣದಲ್ಲಿ ನಿನ್ನೆ ಸಂಜೆ ಕಾಂಗ್ರೆಸ್ ಪಕ್ಷದ ಬ್ರಹತ್ ಚುನಾವಣೆ ಪ್ರಚಾರ ಸಮಾವೇಶದಲ್ಲಿ ಸಿದ್ದರಾಮಯ್ಯ ಮಾತನಾಡಿದರು.
ರಾಜ್ಯದಲ್ಲಿ ಅತ್ಯಂತ ಭ್ರಷ್ಟ ಸರ್ಕಾರ ಇದೆ, ಎಲ್ಲಿ ಹೋದರೂ ಲಂಚ, ಯಾವ ಇಲಾಖೆಗೆ ಹೋದರೂ ಲಂಚ, ಬಿಜೆಪಿ ಸರ್ಕಾರ 40% ಸರ್ಕಾರ ಎಂದು ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.
ಬಡವರ ಪರ, ಜನರಪರವಾದ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತನ್ನಿ ಅಧಿಕಾರಕ್ಕೆ ಬಂದ ಮೇಲೆ ಕಾಂಗ್ರೆಸ್ ಪಕ್ಷದ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರುತ್ತೇವೆ ಎಂದು ಸಿದ್ದರಾಮಯ್ಯ ಹೇಳಿದರು.
ಇದಕ್ಕೂ ಮುಂಚೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತೆರೆದ ವಾಹನದಲ್ಲಿ ಕುಕನೂರು ಪಟ್ಟಣದ ಡಾ ಬಿ ಆರ್ ಅಂಬೇಡ್ಕರ್ ವೃತ್ತದಿಂದ ವೇದಿಕೆಗೆ ಆಗಮಿಸಿದರು,
ಇದಕ್ಕೂ ಮುನ್ನ ಕಾಂಗ್ರೆಸ್ ಅಭ್ಯರ್ಥಿ ಮಾಜಿ ಸಚಿವ ಬಸವರಾಜ್ ರಾಯರಡ್ಡಿ ಮಾತನಾಡಿ, ಪ್ರಸ್ತುತ ಭ್ರಷ್ಟ ರಾಜಕೀಯ ವ್ಯವಸ್ಥೆಯಿಂದ ಜನ ರೋಸಿ ಹೋಗಿದ್ದಾರೆ, ಯಲಬುರ್ಗಾ ಕ್ಷೇತ್ರ ಹಿಂದುಳಿದಿದೆ, ಕ್ಷೇತ್ರದ ಅಭಿವೃದ್ಧಿಗಾಗಿ ಕಾಂಗ್ರೆಸ್ ಗೆ ಮತ ಹಾಕಿ,ಬೆಂಬಲಿಸಿ ಎಂದು ಕೇಳಿಕೊಂಡರು.
ವೇದಿಕೆಯಲ್ಲಿ ಕೆ ಪಿ ಸಿ ಸಿ ಕಾರ್ಯಧ್ಯಕ್ಷ ಸತೀಶ್ ಜಾರಕಿಹೊಳಿ, ಎಂ ಎಲ್ ಸಿ, ಪ್ರಕಾಶ್ ರಾಠೋಡ್, ಕುಷ್ಟಗಿ ಶಾಸಕ ಅಮರೇಗೌಡ ಬಯ್ಯಾಪುರ, ಯಲಬುರ್ಗಾ ಕುಕನೂರು ತಾಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು,, ಸ್ಥಳೀಯ ಮುಖಂಡರು, ಮಹಿಳಾ ಪ್ರತಿನಿಧಿಗಳು,ಕಾರ್ಯಕರ್ತರು ಉಪಸ್ಥಿತರಿದ್ದರು.
ವರದಿ : ಈರಯ್ಯ ಕುರ್ತಕೋಟಿ
Tags
ರಾಜಕೀಯ