ಕಂಪ್ಲಿ ,ಮಾ.07:ಸಾರ್ವತ್ರಿಕ ವಿಧಾನಸಭಾ ಚುನಾವಣೆ ಹಿನ್ನಲ್ಲೆಯಲ್ಲಿ 91-ಕಂಪ್ಲಿ ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿಗಳ ಕಛೇರಿಗೆ ಜಿಲ್ಲಾಚುನಾವಣಾಧಿಕಾರಿ ಪವನಕುಮಾರ ಮಾಲಪಾಟಿ ಭೇಟಿ ಪರಿಶೀಲನೆ.
ನಂತರ ಪತ್ರಕರ್ತರೊಂದಿಗೆ ಮಾತನಾಡಿದ ಜಿಲ್ಲಾ ಚುನಾವಣಾಧಿಕಾರಿ ಆಗಿರುವ ಜಿಲ್ಲಾಧಿಕಾರಿ ಪವನ್‍ಕುಮಾರ್ ಮಾಲಪಾಟಿ ಅವರು 2023ರ ಸಾರ್ವತ್ರಿಕ ವಿಧಾನಸಭಾ ಚುನಾವಣೆಯ ಹಿನ್ನಲೆಯಲ್ಲಿ ಚುನಾವಣೆ ಪ್ರಕ್ರಿಯೆಗಳನ್ನು ಚುನಾವಣಾಧಿಕಾರಿಗಳು ಮುಂಜಾಗರೂಕತೆಯಿಂದ ನಿರ್ವಹಿಹಿಸುತ್ತಿದ್ದಾರೆ ಮತದಾರರಿಗೆ ದುಡ್ಡು ,ಮದ್ಯ,ಹಣ ಸಂಗ್ರಹಣೆ ಮಾಹಿತಿ ಇದ್ದಲ್ಲಿ ಚುನಾವಣಾಧಿಕಾರಿ ಗಮನಕ್ಕೆ ತರಬೇಕು ಚುನಾವಣೆಯ ಮಾದರಿ ನೀತಿ ಸಂಹಿತೆ ಕಟ್ಟುನಿಟ್ಟಿನ ಜಾರಿಗೆ ಜಿಲ್ಲೆಯ ವಿಧಾನಸಭಾ ಕ್ಷೇತ್ರದಲ್ಲಿ 24 ಚೆಕ್‍ಪೋಸ್ಟ್ ಸ್ಥಾಪಿಸಿ, ನೇರ ದೃಶ್ಯಾವಳಿ ಸೆರಿಹಿಡಿಯಲಾಗುತ್ತದೆ ಎಂದು ತಿಳಿಸಿದ್ದಾರೆ.ಮತದಾರರಿಗೆ ಆಮಿಷ ಒಡ್ಡಲು ಮತ್ತು ಅನಧಿಕೃತವಾಗಿ ವಸ್ತುಗಳನ್ನು ನೀಡುವುದು. ದಾಖಲೆಯಿಲ್ಲದ ಹಣವನ್ನು ಸಾಗಾಣೆ ಮಾಡುವುದು ಸೇರಿದಂತೆ ಆಕ್ರಮ ಚಟುವಟಿಕೆಗಳಿಗೆ ಆಸ್ಪದ ನೀಡದೇ ಮುಕ್ತ,ನ್ಯಾಯ ಸಮ್ಮತ ಮತ್ತು ಪಾರದರ್ಶಕ ಚುನಾವಣೆ ನಡೆಸಲು ಹದ್ದಿನ ಕಣ್ಣಿಡಲಾಗಿದೆ. ಇದರ ಭಾಗವಾಗಿ ಬಳ್ಳಾರಿ ಜಿಲ್ಲೆ ಅಂತರ್ ರಾಜ್ಯ ಗಡಿ ಪ್ರದೇಶವನ್ನು ಹೊಂದಿದ್ದು, ಅಂತರ್ ಜಿಲ್ಲಾ ಗಡಿಯನ್ನು ಹೊಂದಿದೆ. ಈ ಹಿನ್ನಲೆಯಲ್ಲಿ ಜಿಲ್ಲಾಡಳಿತ ತೀವ್ರ ಬಿಗಿಯಾದ ಕ್ರಮವನ್ನು ಕೈಗೊಂಡಿದೆ ಅಲ್ಲದೇ, ಎಚ್ಚರಿಕೆಯನ್ನು ವಹಿಸಲಾಗಿದೆ.
ಚುನಾವಣೆ ಅಕ್ರಮಗಳ ಮೇಲೆ ಕಣ್ಗಾವಲು ಇಡಲು ಚೆಕ್‍ಪೋಸ್ಟ್ ಗಳನ್ನು ಸ್ಥಾಪಿಸಿ, ಅಲ್ಲಿ ವಿವಿಧ ತಂಡಗಳನ್ನು ನೇಮಿಸಲಾಗಿದೆ.
ಜಿಲ್ಲೆಯಲ್ಲಿ 8, ಅಂತರ್ ಜಿಲ್ಲೆ ಗಡಿಯಲ್ಲಿ 4 ಮತ್ತು ಅಂತರರಾಜ್ಯ ಆಂಧ್ರಪ್ರದೇಶ ಗಡಿಭಾಗದಲ್ಲಿ 12 ಸೇರಿ 24 ಚೆಕ್‍ಪೋಸ್ಟ್ ಗಳನ್ನು ಸ್ಥಾಪಿಸಿ ಅಧಿಕಾರಿ ಮತ್ತು ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ.
5 ಕ್ಷೇತ್ರದಲ್ಲಿ 24 ಚೆಕ್‍ಪೋಸ್ಟ್ ಸ್ಥಾಪನೆ:ಜಿಲ್ಲೆಯಲ್ಲಿ ಒಟ್ಟು 5 ಮತಕ್ಷೇತ್ರಗಳಿಗೆ ಜಿಲ್ಲೆಯಾದ್ಯಂತ ಒಟ್ಟು 24 ಚೆಕ್‍ಪೋಸ್ಟ್ ಸ್ಥಾಪಿಸಲಾಗಿದೆ. ಪ್ರತಿ ಚೆಕ್‍ಪೋಸ್ಟ್ ನಲ್ಲಿ 3 ಎಸ್‍ಎಸ್‍ಟಿ ಅಧಿಕಾರಿಗಳು ಹಾಗೂ ಪೊಲೀಸ್ ಸಿಬ್ಬಂದಿಗಳನ್ನು ನೇಮಕ ಮಾಡಲಾಗಿದೆ. ಪ್ರತಿ ಮತಕ್ಷೇತ್ರಕ್ಕೆ ಫ್ಲೈಯಿಂಗ್ ಸ್ಕ್ವ್ಯಾಡ್ ಮತ್ತು ವಿಡಿಯೋ ಕಣ್ಗಾವಲು ತಂಡಗಳನ್ನು ನೇಮಕ ಮಾಡಲಾಗಿದೆ.
ಕ್ಷೇತ್ರವಾರು ಚೆಕ್‍ಪೋಸ್ಟ್ ಸ್ಥಾಪನೆ:
ಕಂಪ್ಲಿ ವಿಧಾನಸಭಾ ಕ್ಷೇತ್ರದಲ್ಲಿ 2 ಚೆಕ್‍ಪೋಸ್ಟ್ ಗಳನ್ನು ಸ್ಥಾಪಿಸಲಾಗಿದ್ದು, ಅಂತರ್ ಜಿಲ್ಲೆ ಕೊಪ್ಪಳ ಗಡಿಭಾಗದಲ್ಲಿ ಕಂಪ್ಲಿ ಕೋಟೆ ಸೇತುವೆ ಬಳಿ ಮತ್ತು ವಿಜಯನಗರ ಜಿಲ್ಲೆ ಗಡಿಭಾಗದ ದೇವಲಾಪುರ - ಉಪ್ಪಾರಹಳ್ಳಿ ಬಳಿ ಸ್ಥಾಪನೆ ಮಾಡಲಾಗಿದೆ ಎಂದರು.
ಈ ಸಂದರ್ಭದಲ್ಲಿ 91-ಕಂಪ್ಲಿ ವಿಧಾನಸಭಾಕ್ಷೇತ್ರದ ಚುನಾವಣಾಧಿಕಾರಿ ಡಾ.ನಯನ,ಸಹಾಯಕ ಚುನಾವಣಾಧಿಕಾರಿ ತಹಶೀಲ್ದಾರ ಗೌಸೀಯಬೇಗಂ,ಉಪತಹಶೀಲ್ದಾರ ರವೀಂದ್ರಕುಮಾರ,ಮುಖ್ಯಾಧಿಕಾರಿ ಎನ್.ಶಿವಲಿಂಗಪ್ಪ,ಶೀರಸ್ತೆದಾರ ರಮೇಶ ಇದ್ದರು.
ವರದಿ : ಚನ್ನಕೇಶವ
Tags
ರಾಜ್ಯ