Gold : ಚಿನ್ನ ಖರೀದಿಸುವವರಿಗೆ ಗುಡ್ ನ್ಯೂಸ್! ಚಿನ್ನದ ಬೆಲೆಯಲ್ಲಿ ಮತ್ತಷ್ಟು ಇಳಿಕೆ..!!


 ಚಿನ್ನ ಖರೀದಿಸುವವರಿಗೆ ಗುಡ್ ನ್ಯೂಸ್! ಚಿನ್ನದ ಬೆಲೆಯಲ್ಲಿ ಮತ್ತಷ್ಟು ಇಳಿಕೆ..!!

*******************************

ಬೆಂಗಳೂರು: ಭಾರತ ಹಾಗೂ ವಿದೇಶೀ ಚಿನಿವಾರ ಮಾರುಕಟ್ಟೆಗಳಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆ ಇಳಿಕೆ ಮುಂದುವರಿದಿದೆ. ಭಾರತದಲ್ಲಿ ಆಭರಣ ಚಿನ್ನದ ಬೆಲೆ ಮತ್ತೊಮ್ಮೆ 56,000 ರೂ ಮಟ್ಟಕ್ಕಿಂತ ಕೆಳಗಿಳಿದಿದೆ. ಅಪರಂಜಿ ಚಿನ್ನವೂ 61,000 ರೂ ಮಟ್ಟಕ್ಕಿಂತ ಕೆಳಗಿಳಿದಿದೆ. 

ಬೆಳ್ಳಿ ಬೆಲೆಯಲ್ಲೂ ಇಳಿಕೆ ಆಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 55,650 ರುಪಾಯಿ ಆಗಿದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 60,710 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,640 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 55,700 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 8,000 ರುಪಾಯಿಯಲ್ಲಿ ಇದೆ.

ಜಾಗತಿಕವಾಗಿ ಅತಂತ್ರ ಆರ್ಥಿಕ ಸ್ಥಿತಿ ಇರುವುದರಿಂದ ಹೂಡಿಕೆದಾರರಲ್ಲಿ ಗೊಂದಲ ಮನೆಮಾಡಿದೆ. ಇದೇ ಕಾರಣಕ್ಕೆ ಚಿನ್ನದ ಮೇಲಿನ ಹೂಡಿಕೆ ಸುರಕ್ಷಿತ ಮಾರ್ಗ ಎನಿಸಿದೆ. ಮುಂದೆಯೂ ಆರ್ಥಿಕ ಗೊಂದಲಮಯ ಸ್ಥಿತಿ ಮುಂದುವರಿಯುವುದರಿಂದ ಚಿನ್ನಕ್ಕೆ ಬೇಡಿಕೆ ಕಡಿಮೆ ಆಗುವ ಸಾಧ್ಯತೆ ಬಹಳ ಕಡಿಮೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಏಪ್ರಿಲ್ 25ಕ್ಕೆ):

22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 55,650 ರೂ

24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 60,710 ರೂ

ಬೆಳ್ಳಿ ಬೆಲೆ 10 ಗ್ರಾಂಗೆ: 764 ರೂ.

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 55,700 ರೂ

24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 60,760 ರೂ

ಬೆಳ್ಳಿ ಬೆಲೆ 10 ಗ್ರಾಂಗೆ: 800 ರೂ

Previous Post Next Post

AD

 


Contact For News&Ads

Siddi TV

Contact Form

f="https://unpkg.com/video.js/dist/video-js.css" rel="stylesheet">