ಇಂದಿನಿಂದ ಪಂಜಾಬ್ ಸಿಎಂ ಭಗವಂತ್ ಮಾನ್ ರಾಜ್ಯ ಪ್ರವಾಸ, ಹುಬ್ಬಳ್ಳಿಯಲ್ಲಿ ರೋಡ್ ಶೋ
ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಇಂದಿನಿಂದ ಮೂರು ದಿನ ಕರ್ನಾಟಕ ಪ್ರವಾಸ ಮಾಡಲಿದ್ದಾರೆ.
ಇತ್ತೀಚೆಗಷ್ಟೇ ರಾಷ್ಟ್ರೀಯ ಪಕ್ಷವಾಗಿ ಮಾನ್ಯತೆ ಪಡೆದ ಆಮ್ ಆದ್ಮಿ ಪಕ್ಷ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ 140 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದೆ.
ಈಗಾಗಲೇ ಪಕ್ಷದ ಕಾರ್ಯಕರ್ತರು ರಾಜ್ಯಾದ್ಯಂತ ಬಿರುಸಿನ ಪ್ರಚಾರ ನಡೆಸಿದ್ದಾರೆ. ಕಳೆದ ತಿಂಗಳಷ್ಟೇ ರಾಷ್ಟ್ರೀಯ ನಾಯಕ ಅರವಿಂದ ಕೇಕ್ರಿವಾಲ್ ರಾಜ್ಯ ಪ್ರವಾಸ ಕೈಗೊಂಡಿದ್ದರು.
ಇಂದು ಮಧ್ಯಾಹ್ನ ಮಾನ್ ಅವರು ಹುಬ್ಬಳ್ಳಿಗೆ ಆಗಮಿಸಲಿದ್ದು, ಆಪ್ ಅಭ್ಯರ್ಥಿಗಳ ಪರ ರೋಡ್ ಶೋ ನಡೆಸಲಿದ್ದಾರೆ. ಮಧ್ಯಾಹ್ನ 1:30 ಕ್ಕೆ ಗದಗದ ರೋಣದಲ್ಲಿ ಹಾಗೂ ಸಂಜೆ 5 ಗಂಟೆಗೆ ಹುಬ್ಬಳ್ಳಿಯಲ್ಲಿ ರೋಡ್ ಶೋ ನಡೆಯಲಿದೆ. ಪಂಜಾಬ್ ಸಿಎಂ ಮೂರು ದಿನಗಳ ರೋಡ್ ಶೋ ನಡೆಸಲಿದ್ದಾರೆ.
ವರದಿ : ಬಸವರಾಜ ಕಬಡ್ಡಿ