ಭರ್ಜರಿ ರೋಡ್ ಷೋ ನಡೆಸಿ ಶಕ್ತಿ ಪ್ರದರ್ಶನ ಮಾಡಿ ಕೆ.ಆರ್.ಪೇಟೆ ಪಟ್ಟಣದ ತಾಲೂಕು ಕಛೇರಿಗೆ ಪತ್ನಿ ರಮಾ ಅವರೊಂದಿಗೆ ಆಗಮಿಸಿ ನಾಮಪತ್ರ ಸಲ್ಲಿಸಿದ ಜೆಡಿಎಸ್ ಅಭ್ಯರ್ಥಿ ಹೆಚ್.ಟಿ.ಮಂಜು
ಭರ್ಜರಿ ರೋಡ್ ಷೋ :ನಾಮಪತ್ರ ಸಲ್ಲಿಸಿದ ಜೆಡಿಎಸ್ ಅಭ್ಯರ್ಥಿ ಹೆಚ್.ಟಿ.ಮಂಜು
ಕೆ.ಆರ್.ಪೇಟೆ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಹೆಚ್.ಟಿ.ಮಂಜು ಇಂದು ಸಾವಿರಾರು ಕಾರ್ಯಕರ್ತರ ನೇತೃತ್ವದಲ್ಲಿ ಭರ್ಜರಿ ರೋಡ್ ಷೋ ನಡೆಸಿ ಚುನಾವಣಾಧಿಕಾರಿ ಕೃಷ್ಣಕುಮಾರ್ ಅವರಿಗೆ ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಂಡ್ಯ ಜಿಲ್ಲಾ ಜೆಡಿಎಸ್ ಅಧ್ಯಕ್ಷ ಡಿ.ರಮೇಶ್, ರಾಜ್ಯ ಸಹಕಾರ ಮಾರಾಟ ಮಹಾಮಂಡಲದ ನಿರ್ದೇಶಕ ಚೋಳೇನಹಳ್ಳಿ ಪುಟ್ಟಸ್ವಾಮಿಗೌಡ ಉಪಸ್ಥಿತರಿದ್ದರು..
ಕಿಕ್ಕೇರಿ ಹೋಬಳಿಯಿಂದ ಹತ್ತು ಸಾವಿರಕ್ಕೂ ಹೆಚ್ಚು ಕಾರ್ಯಕರ್ತರು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಿ.ಎಂ ಕಿರಣ್ ರವರ ನೇತೃತ್ವದಲ್ಲಿ ಆಗಮಿಸಿ ಹೆಚ್ ಟಿ ಮಂಜು ರವರಿಗೆ ಸಾಥ್ ನೀಡಿದ್ರು..
ರಾಜ್ಯದ ರೈತರ ಧ್ವನಿಯಾಗಿ ಕೆಲಸ ಮಾಡಿ, ಪಂಚರತ್ನ ಯೋಜನೆಯನ್ನು ಅನುಷ್ಠಾನಗೊಳಿಸಲು ಮಾತೃಹೃದಯಿ ಮುಖ್ಯಮಂತ್ರಿ ಕುಮಾರಣ್ಣ ಅವರು ರಾಜ್ಯದ ಮುಖ್ಯಮಂತ್ರಿ ಮಾಡಲು ಜೆಡಿಎಸ್ ಪ್ರಾದೇಶಿಕ ಪಕ್ಷವನ್ನು ಬೆಂಬಲಿಸಿ ತಮಗೆ ಭರ್ಜರಿ ಗೆಲುವನ್ನು ತಂದುಕೊಡಬೇಕು ಎಂದು ಮನವಿ ಮಾಡಿದ ಹೆಚ್.ಟಿ.ಮಂಜು ಜೆಡಿಎಸ್ ಕಾರ್ಯಕರ್ತರ ಹುಮ್ಮಸ್ಸು, ನಾಮಪತ್ರ ಸಲ್ಲಿಕೆಯ ಕಾರ್ಯಕ್ರಮಕ್ಕೆ ಹರಿದು ಬಂದಿರುವ ಜನಪ್ರವಹವನ್ನು ಗಮನಿಸಿದರೆ ತಮ್ಮ ಗೆಲುವು ನಿಶ್ಚಿತವಾಗಿದೆ. ತಾಲ್ಲೂಕಿನ ಪ್ರಬುದ್ಧ ಮತದಾರ ಬಂಧುಗಳು ದಕ್ಷ ಪ್ರಾಮಾಣಿಕ ಆಡಳಿತ ನೀಡಲು ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ತಮ್ಮನ್ನು ಬೆಂಬಲಿಸುವಂತೆ ಕೈಮುಗಿದು ಮನವಿ ಮಾಡಿದರು.
ಕೆ.ಆರ್.ಪೇಟೆ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯ ಆವರಣದಿಂದ ಆರಂಭವಾದ ಮೆರವಣಿಗೆಯು ತಾಲೂಕು ಕಛೇರಿಯವರೆಗೆ ಭರ್ಜರಿಯಾಗಿ ನಡೆಯಿತು..
ಮಂಡ್ಯ ಹಾಲು ಒಕ್ಕೂಟದ ಮಾಜಿಅಧ್ಯಕ್ಷ ಎಂ.ಬಿ.ಹರೀಶ್, ನಿರ್ದೇಶಕ ಡಾಲುರವಿ, ತಾಲೂಕು ಜೆಡಿಎಸ್ ಅಧ್ಯಕ್ಷ ಜಾನಕೀರಾಂ, ಮುಖಂಡರಾದ ಬಿ.ಎಂ.ಕಿರಣ್, ರಾಮಚಂದ್ರನ್, ಎ.ಬಿ.ನಾಗೇಶ್, ಮಹದೇವೇಗೌಡ, ಕೆ.ಆರ್.ಹೇಮಂತ್ ಕುಮಾರ್, ಕೆ.ಆರ್.ಪುಟ್ಟಸ್ವಾಮಿ, ಕುರುಬಳ್ಳಿ ನಾಗೇಶ್, ನಂದೀಶ್, ಎ.ಆರ್.ರಘು, ಕಾಯಿ ಮಂಜೇಗೌಡ ಸೇರಿದಂತೆ ಸಾವಿರಾರು ಜೆಡಿಎಸ್ ಕಾರ್ಯಕರ್ತರು ಮೆರವಣಿಗೆಯಲ್ಲಿ ಭಾಗವಹಿಸಿದ್ದರು..
*ವರದಿ ಶಂಭು ಕಿಕ್ಕೇರಿ, ಕೃಷ್ಣರಾಜಪೇಟೆ*