ಚುನಾವಣೆ : ಭದ್ರತಾ ಪಡೆಯಿಂದ ಪಥ ಸಂಚಲನ
ಕೊಪ್ಪಳ,: ಸಾರ್ವತ್ರಿಕ ವಿಧಾನಸಭಾ ಚುನಾವಣೆ 2023ರ ನಿಮಿತ್ಯ ಕಾನೂನು ಸುವ್ಯವಸ್ಥೆ ಕಾಪಾಡಲು, ಚುನಾವಣೆ ಪ್ರಕ್ರಿಯೆಯು ನ್ಯಾಯಸಮ್ಮತ ಹಾಗೂ ಶಾಂತಿಯುತವಾಗಿ ನಡೆಯಲು ಜಿಲ್ಲಾ ಪೊಲೀಸ್ ಇಲಾಖೆಯಿಂದ ಬುಧವಾರ ನಗರದಲ್ಲಿ ಭದ್ರತಾ ಪಡೆಯ ಪಥಸಂಚಲನ ಜರುಗಿತು.
ಜಿಲ್ಲಾಧಿಕಾರಿ ಎಂ.ಸುಂದರೇಶ ಬಾಬು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ರತ್ನಂ ಪಾಂಡೆಯ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯಶೋಧಾ ವಂಟಗೋಡಿ ಅವರು ಹಸಿರು ನಿಶಾನೆ ತೋರಿಸುವುದರ ಮಾಲಕ ಪಥಸಂಚಲನಕ್ಕೆ ಚಾಲನೆ ನೀಡಿದರು.
ವರದಿ : ಶಿವಕುಮಾರ ಹಿರೇಮಠ
Tags
ರಾಜಕೀಯ