ಜಿ.ಪಂ. ಮತ್ತು ತಾ.ಪಂ. ಚುನಾವಣೆಗೆ ಚಿಯರ್ ಅಪ್
ಇಂದು ಕೆ ಎಸ್ ಈಶ್ವರಪ್ಪ ನೇತೃತ್ವದಲ್ಲಿ ಕೊಪ್ಪಳದಲ್ಲಿ ಬಿಜೆಪಿ ಸಭೆ.
ಕೊಪ್ಪಳ : ಮುಂಬರುವ ಜಿಲ್ಲಾ ಪಂಚಾಯತಿ, ತಾಲೂಕು ಪಂಚಾಯತಿ ಚುನಾವಣೆಗೆ ಬಿಜೆಪಿ ಜಿಲ್ಲೆಯಲ್ಲಿ ಭರ್ಜರಿ ತಯಾರಿ ನಡೆಸಿದ್ದು ಇಂದು ಕೊಪ್ಪಳದಲ್ಲಿ ಮಾಜಿ ಉಪಮುಖ್ಯಮಂತ್ರಿ ಕೆ ಎಸ್ ಈಶ್ವರಪ್ಪ ಅವರ ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರ, ಪದಾಧಿಕಾರಿಗಳ ಸಭೆ ನಡೆಯಲಿದೆ.
ರಾಜ್ಯ ವಿಧಾನಸಭಾ ಚುನಾವಣೆ ಸೋಲಿನ ಬಳಿಕ ಎಚೆತ್ತುಕೊಂಡಿರುವ ಬಿಜೆಪಿ ಈಗ ಸೆಪ್ಟೆಂಬರ್, ಅಕ್ಟೊಬರ್ ತಿಂಗಳಲ್ಲಿ ನಡೆಯಲಿವೆ ಎನ್ನಲಾದ ಜಿಲ್ಲಾ ಪಂಚಾಯತಿ, ತಾಲೂಕು ಪಂಚಾಯತಿ ಚುನಾವಣೆಗೆ ಬಿಜೆಪಿ ಪಕ್ಷ ಈಗಿನಿಂದಲೇ ತಯಾರಿ ನಡೆಸಲು ಮುಂದಾಗಿದೆ. ಜೊತೆಗೆ ವಿಧಾನಸಭಾ ಚುನಾವಣೆ ಸೋಲಿನಿಂದ ಹತಾಶೆಗೊಂಡಿರುವ ಕಾರ್ಯಕರ್ತರು, ಪದಾಧಿಕಾರಿಗಲು, ಜಿಪಂ, ತಾಪಂ ಆಕಾಂಕ್ಷಿಗಳಿಗೆ ಆತ್ಮ ಸ್ಥೈರ್ಯ ತುಂಬಿ ಗೆಲುವಿನ ಪಾಠ ಹೇಳಿಕೊಡಲು ಮಾಜಿ ಉಪಮುಖ್ಯಮಂತ್ರಿ ಕೆ ಎಸ್ ಈಶ್ವರಪ್ಪ ದಿನಾಂಕ 23ರ ಇಂದು ಶುಕ್ರವಾರ ಬೆಳಿಗ್ಗೆ 11 ಗಂಟೆಗೆ ಕೊಪ್ಪಳ ನಗರದ ಶಿವಶಾಂತವೀರ ಮಂಗಲ ಭವನದಲ್ಲಿ ಬಿಜೆಪಿ ಪಕ್ಷದ ಸಭೆ ಕರೆದಿದ್ದಾರೆ.
ಸಭೆಯಲ್ಲಿ ಜಿಲ್ಲೆಯ ಬಿಜೆಪಿ ಮುಖಂಡರು, ಪದಾಧಿಕಾರಿಗಳು, ಕಾರ್ಯಕರ್ತರು ಭಾಗವಹಿಸಲಿದ್ದಾರೆ, ಇದರ ಜೊತೆಗೆ ಜಿಲ್ಲೆಯ ಐದು ವಿಧಾನಸಭಾ ಕ್ಷೇತ್ರದ ತಾಲೂಕು ಅಧ್ಯಕ್ಷರು, ಪದಾಧಿಕಾರಿಗಳ ಅವಧಿ ಪೂರ್ಣಗೊಂಡಿರುವ ಹಿನ್ನೆಲೆ ನೂತನ ಅಧ್ಯಕ್ಷರು, ಪದಾಧಿಕಾರಿಗಳ ಆಯ್ಕೆಯ ಬಗ್ಗೆಯೂ ಚರ್ಚೆ ನಡೆಯಲಿದೆ ಎಂದು ತಿಳಿದುಬಂದಿದೆ.
ವರದಿ : ಈರಯ್ಯ ಕುರ್ತಕೋಟಿ