Koppal : ಕುಕನೂರ ನವೋದಯ ವಿದ್ಯಾಲಯದ ಪ್ರವೇಶ ಪರೀಕ್ಷೆಗೆ ಅರ್ಜಿ ಆಹ್ವಾನ


ಕುಕನೂರ ನವೋದಯ ವಿದ್ಯಾಲಯದ ಪ್ರವೇಶ ಪರೀಕ್ಷೆಗೆ ಅರ್ಜಿ ಆಹ್ವಾನ

----

ಕೊಪ್ಪಳ : ಕುಕನೂರಿನ ಜವಾಹರ ನವೋದಯ ವಿದ್ಯಾಲಯದಲ್ಲಿ 2024-25ರ ಶೈಕ್ಷಣಿಕ ವರ್ಷದ 6ನೇ ತರಗತಿ ಪ್ರವೇಶ ಪರೀಕ್ಷೆಗೆ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಆಗಸ್ಟ್ 20 ಕೊನೆಯ ದಿನವಾಗಿದ್ದು, ವೆಬ್‌ಸೈಟ್  www.navodaya.gov.in ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳಿಗೆ 2024ರ ಜನವರಿ 20ರಂದು ಪ್ರವೇಶ ಪರೀಕ್ಷೆಯನ್ನು ನಡೆಸಲಾಗುವುದು.

ಅರ್ಜಿ ಸಲ್ಲಿಸಲಿಚ್ಛೀಸುವವರು 2023-24ರ ಶೈಕ್ಷಣಿಕ ವರ್ಷದಲ್ಲಿ 5ನೇ ತರಗತಿಯಲ್ಲಿ ಓದುತ್ತಿರುವ ಶಾಲೆಯ ಮುಖ್ಯೋಪಾಧ್ಯಾಯರಿಂದ ವಿದ್ಯಾರ್ಥಿಯ ವಿವರಗಳೊಂದಿಗೆ ಪ್ರಮಾಣಪತ್ರವನ್ನು ಪಡೆದು, ಇಂಟರ್ನೆಟ್ ಕೇಂದ್ರಗಳಿಗೆ ಹೋಗಿ ಅರ್ಜಿ ಸಲ್ಲಿಸಬೇಕು. ಜೊತೆಗೆ ಪ್ರಮಾಣ ಪತ್ರವನ್ನು ಸಹ ಅಪ್ಲೋಡ್ ಮಾಡಬೇಕು. ಇದರಿಂದ ವಿದ್ಯಾರ್ಥಿಯು ಆಯ್ಕೆಯಾದರೆ, ಅದೇ ಪ್ರಮಾಣ ಪತ್ರವನ್ನು ದಾಖಲಾತಿಯ ಸಮಯದಲ್ಲಿ ಪ್ರಸ್ತುತ ಪಡಿಸಬೇಕಾಗುತ್ತದೆ.

ನವೋದಯ ವಿದ್ಯಾಲಯದಲ್ಲಿ 2024-25ರ ಶೈಕ್ಷಣಿಕ ವರ್ಷದ 6ನೇ ತರಗತಿಗೆ ತಮ್ಮ ಮಕ್ಕಳನ್ನು ಸೇರಬಯಸುವ ಸಾರ್ವಜನಿಕರು, ಪ್ರವೇಶ ಪರೀಕ್ಷೆಗೆ ಅರ್ಜಿ ಸಲ್ಲಿಸಿ, ಸದುಪಯೋಗ ಪಡೆದುಕೊಳ್ಳಬೇಕು ಹಾಗೂ ಇತರರಿಗೂ ಮಾಹಿತಿ ನೀಡಬೇಕು. ಇದರಿಂದ ಗ್ರಾಮೀಣ, ನಗರ ಪ್ರದೇಶದ ಬಡ ಮತ್ತು ಪ್ರತಿಭಾವಂತ ಮಕ್ಕಳಿಗೆ ತಮ್ಮ ಜೀವನ ರೂಪಿಸಿಕೊಳ್ಳಲು ಸಹಾಯಕವಾಗುತ್ತದೆ ಎಂದು ಜವಾಹರ ನವೋದಯ ವಿದ್ಯಾಲಯದ ಪ್ರಾರ್ಚಾರ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Previous Post Next Post

AD

 


Contact For News&Ads

Siddi TV

Contact Form

f="https://unpkg.com/video.js/dist/video-js.css" rel="stylesheet">