ಗ್ರಾ. ಪಂ. ಅಧ್ಯಕ್ಷ, ಉಪಾಧ್ಯಕ್ಷ ಹುದ್ದೆಯ ಎರಡನೇ ಅವಧಿಯ ವರ್ಗವಾರು ಮೀಸಲಾತಿ ನಿಗದಿಗೆ ಜಿಲ್ಲಾಡಳಿತದಿಂದ ಸಭೆ.
ಕುಕನೂರು : ಗ್ರಾಮ ಪಂಚಾಯತಿಗಳಿಗೆ ಎರಡನೇ ಅವಧಿಗೆ ಅಧ್ಯಕ್ಷ, ಉಪಾಧ್ಯಕ್ಷ ಹುದ್ದೆಗೆ ಮೀಸಲಾತಿ ನಿಗದಿಪಡಿಸಲು ಕೊಪ್ಪಳ ಜಿಲ್ಲಾಡಳಿತವು ಗ್ರಾಮ ಪಂಚಾಯತಿ ಸದಸ್ಯರ ಸಭೆಗೆ ದಿನಾಂಕ ಗೊತ್ತುಮಾಡಿದೆ.
ಕೊಪ್ಪಳ ಜಿಲ್ಲೆಯ 7 ತಾಲೂಕಿನಲ್ಲಿ ಬರುವ 153 ಗ್ರಾಮ ಪಂಚಾಯತಿಗಳಿಗೆ ಎರಡನೇ ಅವಧಿಗೆ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಹುದ್ದೆಗೆ ಮೀಸಲಾತಿ ನಿಗದಿ ಮಾಡಬೇಕಾಗಿದ್ದು ಅದರಂತೆ ಕೊಪ್ಪಳ ಜಿಲ್ಲಾಡಳಿತ ಇದೇ ಜೂನ್ 16 ರಿಂದ ಆಯಾ ತಾಲೂಕು ಕೇಂದ್ರಗಳಲ್ಲಿ ನಿಗದಿಪಡಿಸಿದ ಸ್ಥಳಗಳಲ್ಲಿ ಗ್ತಾಮ ಪಂಚಾಯತಿ ಸದಸ್ಯರು, ತಾಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿಗಳು, ಜಿಲ್ಲಾಧಿಕಾರಿಗಳ ಸಮ್ಮುಖದಲ್ಲಿ ಸಭೆ ನಡೆಯಲಿದೆ.
ದಿನಾಂಕ 16 ರಂದು ಕುಷ್ಟಗಿ ತಾಲೂಕಿನ ಪ್ರಥಮ ದರ್ಜೆ ಕಾಲೇಜು ಆವರಣ, ದಿನಾಂಕ 17 ಕನಕಗಿರಿ ತಾಲೂಕಿನ ರಂದು ಕೃಷಿ ಉತ್ಪನ್ನ ಮಾರುಕಟ್ಟೆ ಸಭಾ ಭವನ ಬೆಳಿಗ್ಗೆ 10 ಕ್ಕೆ, ಅಂದೇ ಮದ್ಯಾಹ್ನ 3 ಕ್ಕೆ ಕಾರಟಗಿ ತಾಲೂಕಿನ ಎ ಪಿ ಎಂ ಸಿ ಸಮುದಾಯ ಭವನ, 19 ಕ್ಕೆ ಗಂಗಾವತಿ, ದಿನಾಂಕ 20ರಂದು ಯಲಬುರ್ಗಾ ಮತ್ತು ಕುಕನೂರು ತಾಲೂಕಿನಲ್ಲಿ, 20 ರಂದು ಕೊಪ್ಪಳ ತಾಲೂಕಿನಲ್ಲಿ ಬರುವ ಪಂಚಾಯತಿಗಳ ಸದಸ್ಯರ ಸಭೆ ನಡೆಯಲಿದೆ.
ಕರ್ನಾಟಕ ಗ್ರಾಮ ಸ್ವರಾಜ್ ಪಂಚಾಯತ್ ರಾಜ್ ಆಧಿನಿಯಮ 1993, 44(2) ರ ಅನ್ವಯ ಗ್ರಾಮ ಪಂಚಾಯತಿ ಎರಡನೇ ಅವಧಿಯ ಅಧ್ಯಕ್ಷ, ಉಪಾಧ್ಯಕ್ಷ ಮೀಸಲಾತಿಯ ವರ್ಗವಾರು ಸಂಖ್ಯೆಯನ್ನು ನಿಗದಿಪಡಿಸುವ ಸಭೆ ಜರುಗಲಿದ್ದು ಅಗತ್ಯ ವ್ಯವಸ್ಥೆ ಮಾಡಿಕೊಳ್ಳುವಂತೆ ತಾಲೂಕು ಪಂಚಾಯತಿ, ಗ್ರಾಮ ಪಂಚಾಯತಿಗಳಿಗೆ ಅದೇಶಿಸಿ ಕೊಪ್ಪಳ ಜಿಲ್ಲಾಧಿಕಾರಿಗಳು ಪ್ರಕಟಣೆ ಹೊರಡಿಸಿದ್ದಾರೆ.
ವರದಿ : ಈರಯ್ಯ ಕುರ್ತಕೋಟಿ