ಜೆಡಿಎಸ್ ಅಭ್ಯರ್ಥಿ ಬೆಂಬಲಿಸಲು ಕಳೆದ ವಿಧಾನಸಭಾ ಚುನಾವಣೆಯಲ್ಲಿ ಹಣ ಪಡೆದಿರುವ ಬಗ್ಗೆ ಡಾಲು ರವಿ ಮಾಡಿರುವ ಆರೋಪಗಳನ್ನು ಸಾಬೀತು ಪಡಿಸದಿದ್ದರೆ ಮಾನನಷ್ಟ ಮೊಕದ್ದಮೆ ಹೂಡುವ ಜೊತೆಗೆ ರವಿ ಮನೆಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಲಾಗುವುದು ಎಂದು ಪತ್ರಿಕಾಗೋಷ್ಠಿಯಲ್ಲಿ ಕಾಂಗ್ರೆಸ್ ನಾಯಕರು ಎಚ್ಚರಿಕೆ ನೀಡಿದರು
ಮಂಡ್ಯ ಹಾಲು ಒಕ್ಕೂಟದ ನಿರ್ದೇಶಕ ಡಾಲು ರವಿ ಇತ್ತೀಚೆಗೆ ನಡೆದ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಆಭ್ಯರ್ಥಿಯ ಪರವಾಗಿ ಹಣದ ಆಮಿಷವೊಡ್ಡಿ ಕೆ.ಆರ್.ಪೇಟೆ ತಾಲ್ಲೂಕಿನ ಕಾಂಗ್ರೆಸ್ ಮುಖಂಡರನ್ನು ವಿಧಾನಸಭಾ ಚುನಾವಣೆಯ ಮುಂಚಿತವಾಗಿಯೇ ಅಡಿಯೋ ತಾಲೂಕಿನಾದ್ಯಂತ ವೈರಲ್ ಆಗುತ್ತಿದ್ದಂತೆಯೇ ಕಾಂಗ್ರೆಸ್ ನಾಯಕರಾದ ಎಂ.ಡಿ.ಕೃಷ್ಣಮೂರ್ತಿ ನೇತೃತ್ವದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಕಿಕ್ಕೇರಿ ಸುರೇಶ್, ಬಿ.ನಾಗೇಂದ್ರಕುಮಾರ್, ಜಿ.ಪಂ ಮಾಜಿಸದಸ್ಯ ಕೋಡಿಮಾರನಹಳ್ಳಿ ದೇವರಾಜು ಹಾಗೂ ಕಾಂಗ್ರೆಸ್ ನಾಯಕರಾದ ವಿಜಯ್ ರಾಮೇಗೌಡ, ಪಟ್ಟಣದ ಪ್ರವಾಸಿ ಮಂದಿರದ ಸಫಾಂಗಣದಲ್ಲಿ ಜಂಟಿ ಪತ್ರಿಕಾಗೋಷ್ಠಿ ನಡೆಸಿ
ಬ್ಲಾಕ್ ಕಾಂಗ್ರೇಸ್ ಅದ್ಯಕ್ಷರಾದ ಕಿಕ್ಕೇರಿ ಸುರೇಶ್ ಮಾತನಾಡಿ ಜೆಡಿಎಸ್ ಮುಖಂಡ ಹಾಗೂ ಮನ್ ಮುಲ್ ನಿರ್ದೇಶಕರಾದ ಡಾಲುರವಿ ಅವರ ಆರೋಪವನ್ನು ಸಾರಾಸಗಟಾಗಿ ತಿರಸ್ಕರಿಸಿ ಸುಳ್ಳು ಆರೋಪ ಮಾಡಿರುವ ರವಿ ತಮ್ಮ ಆರೋಪಗಳನ್ನು ಸಾಭೀತುಪಡಿಸಬೇಕು. ಇಲ್ಲದಿದ್ದರೆ ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿದರು. ಕಾಂಗ್ರೆಸ್ ಪಕ್ಷದಲ್ಲಿದ್ದುಕೊಂಡು ರಾಜಕೀಯ ಸ್ಥಾನಮಾನ ಪಡೆದುಕೊಂಡ. ಡಾಲುರವಿ ಕಾಂಗ್ರೆಸ್ ಪಕ್ಷಕ್ಕೆ ಮೋಸಮಾಡಿ ವಿಧಾನಸಭಾ ಚುನಾವಣೆಯ ಸಮಯದಲ್ಲಿ ಜೆಡಿಎಸ್ ಪಕ್ಷ ಸೇರಿದ್ದಾರೆ. ಕಾಂಗ್ರೆಸ್ ಪಕ್ಷದ ಟಿಕೆಟ್ ಆಕಾಂಕ್ಷಿಗಳಾಗಿದ್ದ ನಮ್ಮ ಐದು ಜನರ ಮೇಲೆ ರಾಜಕೀಯವಾಗಿ ಕೆಟ್ಟ ಹೆಸರು ತರಲು ಇಲ್ಲ ಸಲ್ಲದ ಆರೋಪ ಮಾಡುತ್ತಿದ್ದಾರೆ ಎಂದು ತಿಳಿಸಿದ್ರು
ಈ ಸಂಧರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಕಿಕ್ಕೇರಿ ಸುರೇಶ್, ನಾಗೇಂದ್ರಕುಮಾರ್, ಕಾಂಗ್ರೆಸ್ ನಾಯಕರಾದ ಎಂ.ಡಿ.ಕೃಷ್ಣಮೂರ್ತಿ, ವಿಜಯ್ ರಾಮೇಗೌಡ, ಕೋಡಿಮರನಹಳ್ಳಿ ದೇವರಾಜು ಸೇರಿದಂತೆ ನೂರಾರು ಕಾಂಗ್ರೆಸ್ ಮುಖಂಡರುಗಳು ಇದ್ದರು...
*ವರದಿ ಶಂಭು ಕಿಕ್ಕೇರಿ, ಕೃಷ್ಣರಾಜಪೇಟೆ*