Kampli : ಭೀಮ್ ಆರ್ಮಿ ಹಾಗೂ ದಲಿತ ಮುಖಂಡರಿಂದ ಗಣರಾಜ್ಯೋತ್ಸವ ಆಚರಣೆ

ಕಂಪ್ಲಿ :

ಇಂದು ದೇಶದೆಲ್ಲೆಡೆ ಗಣರಾಜ್ಯೋತ್ಸವ ದಿನವನ್ನು ಆಚರಿಸಲಾಗಿತ್ತಿದೆ. ಇನ್ನು ಕಂಪ್ಲಿ ತಾಲೂಕಿನಲ್ಲಿ ಅದ್ದೂರಿಯಾಗಿ ಗಣರಾಜ್ಯೋತ್ಸವನ್ನು ಆಚರಿಸಲಾಗಿದೆ.

ಕಂಪ್ಲಿಯ ದಲಿತ ಮುಖಂಡರು ಹಾಗೂ ಭೀಮ್ ಆರ್ಮಿ ವಿದ್ಯಾರ್ಥಿ ಘಟಕದ ವತಿಯಿಂದ ಕೇಂದ್ರ ವೃತ್ತ ಡಾ.ಬಿ.ಆರ್.ಅಂಬೇಡ್ಕರ್ ಸರ್ಕಲ್ ನಲ್ಲಿ ಸಂವಿಧಾನ ಶಿಲ್ಪಿ ಬಾಬಾ ಸಾಹೇಬರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಪುಷ್ಪ ನಮನ ಸಲ್ಲಿಸುವುದರ ಮೂಲಕ ಗಣರಾಜ್ಯೋತ್ಸವ ದಿನವನ್ನು ವಿಶೇಷವಾಗಿ ಆಚರಿಸಿದರು.

ಗ್ರಾಮೀಣ ಭಾಗಗಳಲ್ಲಿ ಇನ್ನೂ ಅಸ್ಪೃಶ್ಯತೆ ಕಾಣಿಸುತ್ತಿದ್ದು, ಅದನ್ನು ಹೋಗಲಾಡಿಸಲು ನಾವೆಲ್ಲರೂ ಶ್ರಮಿಸೋಣ : ಸಿ.ಆರ್ ಹನುಮಂತ

 ಈ ಸಂದರ್ಭದಲ್ಲಿ ಮಾತನಾಡಿದ ಮುಖಂಡ ಸಿ.ಆರ್ ಹನುಮಂತ, ಗ್ರಾಮೀಣ ಭಾಗಗಳಲ್ಲಿ ಇನ್ನೂ ಅಸ್ಪೃಶ್ಯತೆ ಕಾಣಿಸುತ್ತಿದ್ದು, ಅದನ್ನು ಹೋಗಲಾಡಿಸಲು ನಾವೆಲ್ಲರೂ ಶ್ರಮಿಸೋಣ ಹಾಗೂ ಭಾರತ ಸಂವಿಧಾನವು 1949 ರ ನವೆಂಬರ್ 26 ರಂದು ಅಂಗೀಕಾರವಾಗಿ, 1950 ರ ಜನವರಿ 26 ರಂದು ಜಾರಿಗೆ ಬಂತು. ಈ ದಿನದ ಗೌರವಾರ್ಥವಾಗಿ ಪ್ರತಿ ವರ್ಷ ಜನವರಿ 26 ರಂದು ಭಾರತದಲ್ಲಿ ಗಣರಾಜ್ಯೋತ್ಸವ ದಿನವಾಗಿ ಆಚರಿಸಲಾಗುತ್ತದೆ. ಈ ಸುದಿನದಂದು ಸ್ವಾತಂತ್ರ್ಯ ಹೋರಾಟಗಾರರು ಮಾಡಿದ ತ್ಯಾಗವನ್ನು ಸ್ಮರಿಸಬೇಕು ಎಂದು ನುಡಿದರು.

ಇನ್ನಷ್ಟು ಅಭಿವೃದ್ಧಿಯತ್ತ ಸಾಗಿಸೋಣ : ರವಿ ಮಣ್ಣೂರು

ಈ ರಾಷ್ಟ್ರೀಯ ಹಬ್ಬವು ದೇಶದ ಏಕತೆ ಮತ್ತು ಹೆಮ್ಮೆಯನ್ನು ಕಾಪಾಡಿಕೊಳ್ಳಲು ನಮಗೆಲ್ಲರಿಗೂ ಅವಕಾಶವನ್ನು ನೀಡುತ್ತದೆ. ಇದೇ ಮಂತ್ರವನ್ನು ನಾವೆಲ್ಲರೂ ಸಹ ಜಪಿಸುತ್ತಾ, ಸದಾ ನೆನಪಿನಲ್ಲಿ ಇಟ್ಟುಕೊಂಡು, ಇನ್ನಷ್ಟು ಅಭಿವೃದ್ಧಿಯತ್ತ ಸಾಗಿಸೋಣ ಎಂದು ಭೀಮ್ ಆರ್ಮಿಯ ರವಿ ಮಣ್ಣೂರು ರವರು ಹೇಳಿದ್ರು,,,

ಇನ್ನೂ ಈ ಸಂದರ್ಭದಲ್ಲಿ ದಲಿತ ಮುಖಂಡರಾದ ಸಿ.ಆರ್‌.ಹನುಮಂತ, ಭೀಮ್ ಆರ್ಮಿ ವಿದ್ಯಾರ್ಥಿ ಘಟಕದ ಅಧ್ಯಕ್ಷ ರವಿ ಮಣ್ಣೂರು, ಸಿ.ಎನ್.ಸೂರ್ಯ ನಾರಾಯಣ,  ಲಕ್ಷ್ಮಣ, ತೆಲುಗರ ವಿರುಪಾಣ್ಣ, ಸಣ್ಣಕ್ಕಿ ವಿರುಪಾಕ್ಷಿ, ಬುಜ್ಜಿ ಕುಮಾರ್, ದಾನಕಾಯೋ ಬಸವರಾಜ್ ಮತ್ತು ಮುಖಂಡರು ಹಾಗೂ ಯುವಕರು ಭಾಗಿಯಾಗಿದ್ದರು.

Reported By : Raghuveer,Siddi TV, Kampli



Previous Post Next Post

AD

 


Contact For News&Ads

Siddi TV

Contact Form

f="https://unpkg.com/video.js/dist/video-js.css" rel="stylesheet">