SSLC & PU ಪರೀಕ್ಷೆ ವೇಳಾಪಟ್ಟಿ ಕರ್ನಾಟಕ ಶಾಲಾ ಪರೀಕ್ಷಾ ಮಂಡಳಿ ಪ್ರಕಟಿಸಿದೆ


SSLC&PU ಪರೀಕ್ಷೆ ವೇಳಾಪಟ್ಟಿ ಕರ್ನಾಟಕ ಶಾಲಾ ಪರೀಕ್ಷಾ ಮಂಡಳಿ ಪ್ರಕಟಿಸಿದೆ

ದ್ವಿತೀಯ ಪಿಯುಸಿ ಪರೀಕ್ಷೆಯ ಅಂತಿಮ ವೇಳಾಪಟ್ಟಿಯನ್ನು ಕರ್ನಾಟಕ ಶಾಲಾ ಪರೀಕ್ಷಾ ಮಂಡಳಿ ಪ್ರಕಟಿಸಿದೆ. ವಿದ್ಯಾರ್ಥಿಗಳೆಲ್ಲರೂ ಇದಕ್ಕೆ ಕಾತರದಿಂದ ಕಾದಿದ್ದರು. ದ್ವಿತೀಯ ಪರೀಕ್ಷೆಯ ವೇಳಾಪಟ್ಟಿ ದಿನಾಂಕ ಮತ್ತು ಯಾವಾಗ ಯಾವ ಪರೀಕ್ಷೆ ನಡೆಯುತ್ತದೆ ಎಂಬ ಮಾಹಿತಿಯನ್ನು ನಾವಿಲ್ಲಿ ನೀಡಿದ್ದೇವೆ ದಯವಿಟ್ಟು ಎಲ್ಲಾ ವಿದ್ಯಾರ್ಥಿಗಳು ಗಮನಿಸಿ.


ಇನ್ನು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ 01-03-2024 ರ ಶುಕ್ರವಾರ ಕನ್ನಡ ಹಾಗೂ ಅರೇಬಿಕ್ ಪರೀಕ್ಷೆ, 04-03-2024 ಸೋಮವಾರ ಗಣಿತ ಪರೀಕ್ಷೆ, 05-03-2024 ರಂದು ರಾಜ್ಯ ಶಾಸ್ತ್ರ, ಸಂಖ್ಯಾಶಾಸ್ತ್ರ ಪರೀಕ್ಷೆ.06-03-2024 ರಂದು ಮಾಹಿತಿ ತಂತ್ರಜ್ಞಾನ, ರೀಟೈಲ್, ಆಟೋ ಮೊಬೈಲ್,ಪರೀಕ್ಷೆ. 07-03-2024 ರಂದು ಇತಿಹಾಸ ಹಾಗೂ ಭೌತಶಾಸ್ತ್ರ ಪರೀಕ್ಷೆ. 09-03-2024 ಐಚ್ಛಿಕ ಕನ್ನಡ,ಲೆಕ್ಕಶಾಸ್ತ್ರ, ಭೂಗರ್ಭ ಶಾಸ್ತ್ರ,ಗೃಹ ವಿಜ್ಞಾನ ಪರೀಕ್ಷೆ.

11-03-2024 ರಂದು ತರ್ಕಶಾಸ್ತ್ರ,ವ್ಯವಹಾರ ಅಧ್ಯಯನ ಪರೀಕ್ಷೆ. 13-03-2024 ರಂದು ಇಂಗ್ಲಿಷ್ ಪರೀಕ್ಷೆ, 15-03-2024 ರಂದು ಹಿಂದೂಸ್ತಾನಿ ಸಂಗೀತ, ಮನಃಶಾಸ್ತ್ರ, ರಸಾಯನ ಶಾಸ್ತ್ರ, ಮೂಲಗಣಿತ ಪರೀಕ್ಷೆ. 16-03-2024 ರಂದು ಅರ್ಥಶಾಸ್ತ್ರ ಪರೀಕ್ಷೆ, 18-03-2024 ರಂದು ಭೂಗೋಳ ಶಾಸ್ತ್ರ, ಜೀವಶಾಸ್ತ್ರ ಪರೀಕ್ಷೆ. 20-03-2024 ರಂದು ಸಮಾಜಶಾಸ್ತ್ರ, ವಿದ್ಯುನ್ಮಾನ ಶಾಸ್ತ್ರ, ಗಣಕ ವಿಜ್ಞಾನ ಪರೀಕ್ಷೆ. 22-03-2024 ರಂದು ಹಿಂದಿ ಪರೀಕ್ಷೆ. ಬೆಳಗ್ಗೆ 10.15ಕ್ಕೆ ಪರೀಕ್ಷೆ ಆರಂಭವಾಗಿ 1.30ಕ್ಕೆ ಮುಕ್ತಾಯ.

SSLC ಪರೀಕ್ಷೆಯ ಅಂತಿಮ ವೇಳಾಪಟ್ಟಿಯನ್ನು ಕರ್ನಾಟಕ ಶಾಲಾ ಪರೀಕ್ಷಾ ಮಂಡಳಿ ಪ್ರಕಟಿಸಿದೆ. ವಿದ್ಯಾರ್ಥಿಗಳೆಲ್ಲರೂ ಇದಕ್ಕೆ ಕಾತರದಿಂದ ಕಾದಿದ್ದರು. SSLC ಪರೀಕ್ಷೆಯ ವೇಳಾಪಟ್ಟಿ ದಿನಾಂಕ ಮತ್ತು ಯಾವಾಗ ಯಾವ ಪರೀಕ್ಷೆ ನಡೆಯುತ್ತದೆ ಎಂಬ ಮಾಹಿತಿಯನ್ನು ನಾವಿಲ್ಲಿ ನೀಡಿದ್ದೇವೆ ದಯವಿಟ್ಟು ಎಲ್ಲಾ ವಿದ್ಯಾರ್ಥಿಗಳು ಗಮನಿಸಿ. ಹಾಗೇ ತಯಾರಿ ನಡೆಸಿ. 25-03-2024 ರ ಸೋಮವಾರ ಪ್ರಥಮ ಭಾಷೆ ಪರೀಕ್ಷೆ ನಡೆಯಲಿದೆ. ಕನ್ನಡ,ತೆಲುಗು ,ಹಿಂದಿ,ಮರಾಠಿ, ತಮಿಳು,ಉರ್ದು,ಇಂಗ್ಲಿಷ್, +ಇಂಗ್ಲಿಷ್NCERT) ನಿಮ್ಮ ಆಯ್ಕೆಯದ್ದು.

27-03-2024 ರಂದು ಸಮಾಜ ವಿಜ್ಞಾನ ಪರೀಕ್ಷೆ ನಡೆಯಲಿದೆ ಎಂದು ತಿಳಿಸಲಾಗಿದೆ. 30-03-2024 ರಂದು ,ವಿಜ್ಞಾನ ,ರಾಜ್ಯಶಾಸ್ತ್ರ, ಪರೀಕ್ಷೆ ನಡೆಯಲಿದೆ. 02-04-2024 ರಂದು ಗಣಿತ,ಸಮಾಜ ಶಾಸ್ತ್ರ ಪರೀಕ್ಷೆ ನಡೆಯುತ್ತದೆ. 03-04-2024 ಅರ್ಥಶಾಸ್ತ್ರ ಪರೀಕ್ಷೆ ನಡೆಯಲಿದೆ. ಬೆಳಗ್ಗೆ 10.15 ರಿಂದ ಮಧ್ಯಾಹ್ನ 1.30 ರ ವರೆಗೆ ನಡೆಯಲಿರೋ ಪರೀಕ್ಷೆಗೆ ವಿದ್ಯಾರ್ಥಿಗಳು ಹಾಜರಾಗಬೇಕು.

Previous Post Next Post

AD

 


Contact For News&Ads

Siddi TV

Contact Form

f="https://unpkg.com/video.js/dist/video-js.css" rel="stylesheet">