ಮತ್ತೊಂದು ಹೊಸ ಘೋಘಣೆ ಹೊರಡಿಸಿದ ಈಶ್ವರಪ್ಪ..!
ಮಗನಿಗೆ ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ಬಂಡಾಯ ಎದ್ದಿರುವ ಕೆ ಎಸ್ ಈಶ್ವರಪ್ಪನವರು ಶಿವಮೊಗ್ಗದಿಂದ ಪಕ್ಷೇತರವಾಗಿ ಸ್ಪರ್ಧಿಸೋದು ಫಿಕ್ಸ್ ಆಗಿದೆ. ಬ್ರಹ್ಮ ಬಂದರೂ ನಿರ್ಧಾರ ಬದಲಿಸಲ್ಲ ಎಂದಿದ್ದಾರೆ. ಈ ಬೆನ್ನಲ್ಲೇ ಈಶ್ವರಪ್ಪನವರು ಮತ್ತೊಂದು ಘೋಷಣೆ ಮಾಡಿದ್ದಾರೆ.
ಪಕ್ಷೇತರ ಸ್ಪರ್ಧೆಗೆ ಮುಂದಾಗಿರುವ ಈಶ್ವರಪ್ಪನವರು ಇದೀಗ ಕ್ಷೇತ್ರದ ಮಠ-ಮಂದಿರಗಳಿಗೆ ಭೇಟಿ ನೀಡುತ್ತಿದ್ದಾರೆ. ಅಂತೆಯೇ ಇಂದು ಅವರು ಬಾಳೆಹೊನ್ನೂರಿನ ರಂಬಾಪುರಿ ಮಠಕ್ಕೆ ಭೇಟಿ ನೀಡಿ ಮಾಧ್ಯಮಗಳಿಗೆ ಕೆಲವು ಹೇಳಿಕೆ ನೀಡಿದರು.