ಬಳ್ಳಾರಿ : ಕರ್ತವ್ಯದಲ್ಲಿ ನಿಧನರಾದ ಮಸ್ಕಿಯ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜು ಉಪನ್ಯಾಸಕ ಶಂಕರ್ ಗೌಡ
ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜು, ಮಸ್ಕಿಯ ಸಮಾಜಶಾಸ್ತ್ರ ಉಪನ್ಯಾಸಕರಾದ ಶ್ರೀ ಶಂಕರ್ ಗೌಡ ಅವರು ಇಂದು ಬಳ್ಳಾರಿಯ ಸೇಂಟ್ ಜಾನ್ ಪದವಿಪೂರ್ವ ಕಾಲೇಜ್ ಸಮಾಜಶಾಸ್ತ್ರ ಮೌಲ್ಯಮಾಪನ ಕೇಂದ್ರದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾಗ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ.
ಮೌಲ್ಯಮಾಪನ ಕೇಂದ್ರದಲ್ಲಿ ಸರಿಯಾದ ಮೂಲಭೂತ ಸೌಲಭ್ಯಗಳು ಇಲ್ಲ, ಸೌಲಭ್ಯವಿಲ್ಲದ ಕಾರಣ ಆರೋಗ್ಯ ಸಮಸ್ಯೆ ಹೆಚ್ಚಾಗಿದೆ ಎಂದು ಕೆಲ ಉಪನ್ಯಾಸಕರು ವ್ಯಕ್ತಪಡಿಸಿದ್ದಾರೆ.