ಮೇ ಮೊದಲ ವಾರ ಎಸ್ಸೆಸ್ಸೆಲ್ಸಿ ಫಲಿತಾಂಶ
ಬೆಂಗಳೂರು
ಎಸ್ಸೆಸ್ಸೆಲ್ಸಿ ಪರೀಕ್ಷೆ-1ರ ಫಲಿತಾಂಶ ಮೇ ಮೊದಲ ವಾರ ಪ್ರಕಟವಾಗುವ ಸಾಧ್ಯತೆ ಇದೆ. ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯ ಇನ್ನೂ ಪೂರ್ಣಗೊಳ್ಳದ ಕಾರಣ ತಿಂಗಳಾಂತ್ಯಕ್ಕೆ ಫಲಿತಾಂಶ ಪ್ರಕಟವಾಗುವ ಸಾಧ್ಯತೆ ಇಲ್ಲ ಎಂದು ತಿಳಿದು ಬಂದಿದೆ.
ಏ.15ರಂದು ಮೌಲ್ಯಮಾಪನ ಆರಂಭವಾಗಿದೆ. ಶೇ.20ರಿಂದ 30 ಉತ್ತರ ಪತ್ರಿಕೆಗಳ ಮೌಲ್ಯಮಾಪನ ಬಾಕಿ ಇದೆ. ಏ.26ರಂದು ಲೋಕಸಭಾ ಚುನಾವಣೆ ಕಾರಣ ಮೌಲ್ಯಮಾಪಕರಿಗೆ ರಜೆ ನೀಡಲಾಗಿದೆ.
ಅದಾದ ನಂತರ ಒಂದೆರಡು ದಿನಗಳಲ್ಲಿ ಮೌಲ್ಯಮಾಪನ ಪೂರ್ಣಗೊಳ್ಳಲಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಅಧ್ಯಕ್ಷೆ ಮಂಜುಶ್ರೀ ತಿಳಿಸಿದ್ದಾರೆ.