ರಸ್ತೆ ಅಪಘಾತ ; ಓರ್ವ ಮೃತ
ಕಂಪ್ಲಿ ತಾಲೂಕಿನ ಸಮೀಪದ ಹಳೆ ದರೋಜಿ ಗ್ರಾಮದ ಬಳಿ ರಸ್ತೆ ಅಪಘಾತ ಸಂಭವಿಸಿ ವಾಹನ ಸವಾರರೊಬ್ಬ ಮೃತಪಟ್ಟ ಘಟನೆ ಭಾನುವಾರ 5:00 ಸುಮಾರು ಜರುಗಿದ್ದು, ತಡವಾಗಿ ಬೆಳಕಿಗೆ ಬಂದಿದೆ. ತಿಮ್ಮಪ್ಪ 52 ವರ್ಷ ಮೃತ ವ್ಯಕ್ತಿ. ಹಳೆ ದರೋಜಿ ಗ್ರಾಮದಿಂದ ಕಂಪ್ಲಿ ಮಾರ್ಗವಾಗಿ ದ್ವಿಚಕ್ರ ವಾಹನದಲ್ಲಿ ವೇಗವಾಗಿ ಚಲಿಸುತ್ತಿದ್ದ ವೇಳೆ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದ್ದು ತಲೆಗೆ ಗಂಭೀರ ಗಾಯವಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಈ ಕುರಿತು ಕುಡುತಿನಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ