ಕಂಪ್ಲಿ :
ಪಟ್ಟಣದ ತಹಶೀಲ್ದಾರ್ ಕಛೇರಿಯ ಸಭಾಂಗಣದಲ್ಲಿ ತಾಲೂಕು ಆಡಳಿತದ ಸಹಯೋಗದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಆದ್ಯ ವಚನಕಾರ ದೇವರ ದಾಸಿಮಯ್ಯ ಜಯಂತಿ ಆಚರಿಸಲಾಯಿತು.
ತಹಶೀಲ್ದಾರ್ ಶಿವರಾಜ ಶಿವಪುರ ಮಾತನಾಡಿ, ಇಡೀ ಮಾನವ ಕುಲಕ್ಕೆ ಸನ್ಮಾರ್ಗವನ್ನು ತಮ್ಮ ವಚನಗಳ ಮೂಲಕ ತೋರಿಸಿದ ಆದ್ಯ ವಚನಕಾರ ದೇವರ ದಾಸಿಮಯ್ಯ ಸರ್ವ ಸಮುದಾಯಗಳಿಗೆ ಮಾದರಿಯಾಗಿದ್ದಾರೆ. ವಚನಗಳನ್ನು ಆಲಿಸುವುದರಿಂದ ಜೀವನದಲ್ಲಿ ಸ್ಫೂರ್ತಿ ಹೆಚ್ಚುತ್ತದೆ. ಸರಿಯಾದ ದಾರಿಯಲ್ಲಿ ನಡೆಯುವ ಮೂಲಕ ಜೀವನ ಸಾರ್ಥಕ ಮಾಡಿಕೊಳ್ಳಲು ಶರಣರ ವಚನಗಳು ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು ಎಂದು ಹೇಳಿದರು. ನೇಕಾರ ಸಮುದಾಯಗಳ ಒಕ್ಕೂಟದ ಅಧ್ಯಕ್ಷ ಪಿ.ಬ್ರಹ್ಮಯ್ಯ ಮಾತನಾಡಿ, ಸಾಕಷ್ಟು ವರ್ಷಗಳಿಂದ ದೇವರ ದಾಸಿಮಯ್ಯ ಜಯಂತಿ ಆಚರಿಸಿಕೊಂಡು ಬರಲಾಗಿದೆ.ಲೋಕಸಭಾ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಜಯಂತಿಯನ್ನು ಸರಳವಾಗಿ ಆಚರಿಸಲಾಗುತ್ತಿದೆ. ನೇಕಾರ ಸಮುದಾಯದವರು ಆಯಾ ವೃತ್ತಿಗಳನ್ನು ಅವಲಂಭಿಸುತ್ತ ಜೀವನ ನಡೆಸುತ್ತಿದ್ದಾರೆ. ಸರ್ಕಾರದ ಪ್ರತಿಯೊಂದುಸೌಲಭ್ಯಗಳನ್ನು ನೇಕಾರ ಸಮುದಾಯಗಳಿಗೆ ಒದಗಿಸಿಕೊಡಬೇಕಾಗಿದೆ ಎಂದರು.
ನೇಕಾರ ಸಮುದಾಯಗಳ ಒಕ್ಕೂಟದ ಜಿ.ಸುಧಾಕರ ಮಾತನಾಡಿದರು.
ಇದೇ ಸಂದರ್ಭದಲ್ಲಿ ದೇವರ ದಾಸಿಮಯ್ಯ ಭಾವಚಿತ್ರಕ್ಕೆ ವಿಶೇಷ ಪೂಜೆ ಹಾಗೂ ಪುಷ್ಪ ನಮನ ಸಲ್ಲಿಸಲಾಯಿತು.
ಈ ಕಾರ್ಯಕ್ರಮದಲ್ಲಿ ಶಿರಸ್ತೇದಾರ ಜಿ.ಪಂಪಾಪತಿ, ರಮೇಶ, ಪ್ರಥಮ ದರ್ಜೆ ಸಹಾಯಕ ಮಾಲತೇಶ ದೇಶಪಾಂಡೆ, ಗ್ರಾಮ ಆಡಳಿತ ಅಧಿಕಾರಿಗಳಾದ ವಿಜಯಕುಮಾರ ಪ್ರಭುಲಿಂಗ, ಮಹ್ಮದ್ ರಬ್, ತಾಲೂಕು ಕಛೇರಿ ಸಿಬ್ಬಂದಿಗಳಾದ ಸುರೇಶ, ಶಿಲ್ಪಾ,ರಮೇಶ, ಜಗನ್ನಾಥ, ಸಂತೋಷ,ಭೂ ದಾಖಲೆಗಳ ಇಲಾಖೆಯ ಮಹಾಂತೇಶ ಪ್ರಮುಖರಾದ ಗದ್ಗಿ ವಿರೂಪಾಕ್ಷಿ, ಸಪ್ಪರದ ರಾಘವೇಂದ್ರ, ಜಗದೀಶ ಪೂಜಾರ, ರಾಜು, ಪ್ರಶಾಂತ, ಭರತ್, ಮಿಟ್ಟಿ ಶಂಕರ,ಹಾಗೂ ವಿವಿಧ ಇಲಾಖೆ ಸಿಬ್ಬಂದಿಗಳು ಸೇರಿದಂತೆ ಅನೇಕರಿದ್ದರು.