ಬಕ್ರೀದ್ ಹಬ್ಬದ ನಿಮಿತ್ತ ಮುಸ್ಲಿಂ ಬಾಂಧವರಿಂದ ವಿಶೇಷ ಪ್ರಾರ್ಥನೆ
ಕಂಪ್ಲಿ : ಪಟ್ಟಣದ ಹೊರ ವಲಯದಲ್ಲಿರುವ ಈದ್ಗಾ ಮೈದಾನದಲ್ಲಿ ಬಕ್ರೀದ್ ಹಬ್ಬದ ನಿಮಿತ್ತ ಸಮಸ್ತ ಮುಸ್ಲಿಂ ಬಾಂಧವರು ವಿಶೇಷ ಪ್ರಾರ್ಥನೆ ಸಲ್ಲಿಸುವುದರ ಮೂಲಕ ಆಚರಿಸಿದರು.
ಸಾಮೂಹಿಕ ಪ್ರಾರ್ಥನೆ ಮುಗಿದ ಬಳಿಕ ಮುಸ್ಲಿಂ ಬಾಂಧವರು ಪರಸ್ಪರ ಹಸ್ತಲಾಘವ ಮಾಡಿ ಹಬ್ಬದ ಶುಭಾಶಯಗಳನ್ನು ಕೋರಿದರು.
ಇನ್ನು ಈ ಕಾರ್ಯಕ್ರಮದಲ್ಲಿ ಶಾಸಕ ಜೆ.ಎನ್ ಗಣೇಶ್ ಭಾಗಿಯಾಗಿ, ಮುಸ್ಲಿಂ ಸಮುದಾಯದವರಿಗೆ ಶುಭಾಶಯ ತಿಳಿಸಿದರು.
ಕಂಪ್ಲಿ ಪಟ್ಟಣದ ಎಲ್ಲ ಸಮಾಜ ಬಾಂಧವರು ಮುಸ್ಲಿಂ ಬಾಂಧವರಿಗೆ ಬಕ್ರೀದ್ ಹಬ್ಬದ ಶುಭಾಶಯ ತಿಳಿಸಿದರು. ಈ ವೇಳೆ ಮುಸ್ಲಿಂ ಸಮಾಜದ ಹಿರಿಯರು, ಮುಖಂಡರು, ಯುವಕರು, ಮಕ್ಕಳು ಭಾಗವಹಿಸಿದ್ದರು.