Kampli : ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ


ಬಾಲಕಾರ್ಮಿಕ ಪದ್ಧತಿ ವಿರೋಧಿ ಜಾಥ

ಕಂಪ್ಲಿ : ಬಳ್ಳಾರಿ ಜಿಲ್ಲಾಡಳಿತ ಹಾಗೂ ತಾಲೂಕು ಆಡಳಿತ ವತಿಯಿಂದ ಬಾಲ ಕಾರ್ಮಿಕ ಪದ್ದತಿ ವಿರೋಧಿ ಜಾಥವನ್ನು ನಗರದ ಪ್ರಮುಖ ಬೀದಿಗಳಲ್ಲಿ ಶಾಲಾ ಮಕ್ಕಳೊಂದಿಗೆ ಘೋಷಣೆ ಕೂಗುತ್ತ, ಸಂಚಾರಿಸಿ ಜಾಗೃತಿ ಮೂಡಿಸುವ ಮೂಲಕ ಬಿ.ಎಸ್.ವಿ ಶಾಲಾ ಆವರಣದಲ್ಲಿ ಸಮಾವೇಶಗೊಂಡಿತು.

ಪೋಷಕರು ತಮ್ಮ ಮಕ್ಕಳನ್ನು ಕೂಲಿಗೆ ಕಳುಹಿಸಬಾರದು. ಬಾಲಕಾರ್ಮಿಕ ಪದ್ದತಿ ವಿರೋಧಿಸಿ ಪೋಷಕರು ಮಕ್ಕಳಿಗೆ ಶಿಕ್ಷಣದ ಅರಿವು ಮೂಡಿಸಿರಿ ಎಂದು ಕಂಪ್ಲಿ ತಹಶೀಲ್ದಾರ್ ಶಿವರಾಜ ಶಿವಪುರ ಕರೆ ನೀಡಿದರು. ಪಟ್ಟಣದ ಬಿ.ಎಸ್.ವಿ ಶಾಲೆಯಿಂದ ಪ್ರಮುಖ ಬೀದಿಗಳಲ್ಲಿ ಜಾಗೃತಿ ಜಾಥಾ ಮಾಡಿ ಭಾರತಿ ಶಿಶು ವಿದ್ಯಾಲಯದ ಆವರಣದಲ್ಲಿ ಬುಧುವಾರ ತಾಲೂಕು ಆಡಳಿತ,ತಾಲೂಕು 'ಪಂಚಾಯತ್,ಕಾರ್ಮಿಕ ಇಲಾಖೆ, ಪುರಸಭೆ,ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ,ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ,ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿ, ಮಕ್ಕಳ ಸಹಾಯವಾಣಿ,ಬಿ.ಎಸ್.ವಿ ಶಾಲೆ ಮತ್ತು ವಿವಿಧ ಇಲಾಖೆಗಳು ಕಂಪ್ಲಿ ಇವರ ಸಂಯುಕ್ತಾಶ್ರಯದಲ್ಲಿ ವಿಶ್ವ ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ ಉದ್ಘಾಟಿಸಿ ಅವರು ಮಾತನಾಡಿದರು.ಮಕ್ಕಳು ರಾಷ್ಟ್ರದ ಸಂಪತ್ತು.ಬಾಲ್ಯಾವಸ್ಥೆಯ ಹಾಗೂ ಕಿಶೋರಾವಸ್ಥೆಯ ಕಾರ್ಮಿಕ ಪದ್ಧತಿಯು ಮಕ್ಕಳನ್ನು ದೈಹಿಕ, ನೈತಿಕ, ಮಾನಸಿಕ ಹಾಗೂ ಆರ್ಥಿಕವಾಗಿ ಶೋಷಣೆಗೆ ಒಳಪಡಿಸಿ ಅವರ ಶಿಕ್ಷಣ ಅವಕಾಶಗಳನ್ನು ತಡೆಗಟ್ಟುತ್ತದೆ. ಕಲಿಯುವ ವಯಸ್ಸಿನಲ್ಲಿ ಮಕ್ಕಳು ಶಿಕ್ಷಣದಿಂದ ದೂರ ಉಳಿದು "ದುಡಿಮೆಯೆಲ್ಲಿ ತೊಡಗಿಕೊಳ್ಳುವುದು ಅತ್ಯಂತ ಕಳವಳಕಾರಿ ಸಂಗತಿ ಎಂದು ವಿಷಾದ ವ್ಯಕ್ತಪಡಿಸಿದರು. ಬಾಲಕಾರ್ಮಿಕ ಯೋಜನಾ ಸೊಸೈಟೆ ಕಾರ್ಮಿಕ ಇಲಾಖೆಯ ಜಿಲ್ಲಾ ಯೋಜನಾ ನಿರ್ದೆಶಕ

ಮೌನೇಶ ಪ್ರಾಸ್ತಾವಿಕವಾಗಿ ಮಾತನಾಡಿದ ಅವರು, 18 ವರ್ಷ ಒಳಗಿನ ಮಕ್ಕಳನ್ನು ದುಡಿಮೆಗೆ ಕಳುಹಿಸದೆ ಪ್ರತಿಯೊಬ್ಬ ಪೋಷಕರು ಶಾಲೆಗೆ ಕಳುಹಿಸಬೇಕು. ಒಂದು ವೇಳೆ ಮಕ್ಕಳನ್ನು ಮೆಕಾನಿಕ್ ಶಾಪ್, ಗ್ಯಾರೇಜ್, ಹೋಟೆಲ್ ಸೇರಿದಂತೆ ಇತರೆಡೆ ಕಳುಹಿಸದರೆ ಮಾಲೀಕರಿಗೆ ಸಹ ದಂಡ ವಿಧಿಸಲಾಗುವುದು ಎಂದು ತಿಳಿಸಿದರು.

ಜಿಲ್ಲಾ ಕಾರ್ಮಿಕ ಅಧಿಕಾರಿ ಕಮಲ್  ಅಲ್ತಾಫ್ ಅಹ್ಮದ್ ಮಾತನಾಡಿ ಬಾಲ ಕಾರ್ಮಿಕರಾಗಿ ಕಲಿಯುವ ವಯಸ್ಸಿನಲ್ಲಿ ಮಕ್ಕಳು ಶಿಕ್ಷಣದಿಂದ ದೂರ ಉಳಿದು ದುಡಿಮೆಯಲ್ಲಿ ತೊಡಗಿಕೊಳ್ಳುವುದು ಅಪರಾಧ ಪೋಷಕರು ತಮ್ಮ ಮಕ್ಕಳನ್ನು ಕೆಲಸಕ್ಕೆ ಕಳುಹಿಸದೇ ಶಿಕ್ಷಣ ಪಡೆಯಲು ಶಾಲೆಗೆ ಕಳುಹಿಸಬೇಕೆಂದು ಮನವಿ ಮಾಡಿದರು.

ಸಂಪನ್ಮೂಲ ನಿಕಟ ಪೂರ್ವ ಕರ್ನಾಟಕ ರಾಜ್ಯ ಮಕ್ಕಳ ರಕ್ಷಣಾ ಆಯೋಗ ಸದಸ್ಯ ಹೆಚ್.ಸಿ.ರಾಘವೇಂದ್ರ ಬಾಲಕಾರ್ಮಿಕ ಮತ್ತು ಕಿಶೋರ ಕಾರ್ಮಿಕ ( ನಿಷೇಧ ಮತ್ತು ನಿಯಂತ್ರಣ) ಕಾಯ್ದೆ ಕುರಿತು ಮಕ್ಕಳಿಗೆ ಉಪನ್ಯಾಸ ನೀಡಿದರು. ಈ ಸಂದರ್ಭದಲ್ಲಿ ಕಂಪ್ಲಿ ಪುರಸಭೆ ಮುಖ್ಯಾಧಿಕಾರಿ ದುರುಗಣ್ಣ,ಹೊಸಪೇಟೆ ಕಾರ್ಮಿಕ ನಿರೀಕಕ ಎಂ.ಅಶೋಕ, ಇಸಿಓ ಬಸವರಾಜ,ವೈದ್ಯಾಧಿಕಾರಿ ಭರತ ಪದ್ಮಶಾಲಿ,ಎಸಿಡಿಪಿಓ ಮೋಹನಕಾಳಪುರ,ತಾಪಂ ವ್ಯವಸ್ಥಾಪಕಿ ಅಪರಂಜಿ,ಬಾಲಕಾರ್ಮಿಕ ಯೋಜನೆ ಕ್ಷೇತ್ರ ಅಧಿಕಾರಿ ಈಶ್ವರ,ಕಾರ್ಮಿಕ ಇಲಾಖೆಯ ಅನಿಲ್ ಸೇರಿದಂತೆ ಶಾಲೆಯ ಮುಖ್ಯಗುರುಗಳು ವಿದ್ಯಾರ್ಥಿಗಳು ಭಾಗವಹಿಸಿದ್ದರು.

[ಮಕ್ಕಳು ವಿವಿಧ ಸಮಸ್ಯೆಗಳಿಂದ ಬಾಲ್ಯದ ಹಂತದಲ್ಲಿಯೇ ಕೆಲಸ ಮಾಡುವ ಸ್ಥಿತಿ ಎದುರಿಸುತ್ತಾರೆ. ಮಕ್ಕಳಿಗೆ ಉತ್ತಮ ಗುಣಮಟ್ಟದ ಶಿಕ್ಷಣ ಕೊಡಿಸಿ,  ಮೂಲ ಸೌಕರ್ಯ ಕೊಡಿಸುವ ಜವಾಬ್ದಾರಿ ಪ್ರತಿಯೊಬ್ಬರದ್ದು. ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಎಲ್ಲರೂ ಕೈ ಜೋಡಿಸಬೇಕು ಎಂಬುದು ಸಿದ್ದಿ ಟಿವಿ ಆಶಯ.]


ರಘುವೀರ್, ಸಿದ್ದಿ ಟಿವಿ, ಕಂಪ್ಲಿ

Previous Post Next Post

AD

 


Contact For News&Ads

Siddi TV

Contact Form

f="https://unpkg.com/video.js/dist/video-js.css" rel="stylesheet">