ಅಂತರಾಷ್ಟ್ರೀಯ ಮಾದಕ ವಸ್ತುಗಳ ಸೇವನೆ ಹಾಗೂ ಕಳ್ಳ ಸಾಗಾಣಿಕೆ ವಿರೋಧಿ ದಿನಾಚರಣೆ
ಕಂಪ್ಲಿ : ಅಂತರಾಷ್ಟ್ರೀಯ ಮಾದಕ ವಸ್ತುಗಳ ಸೇವನೆ ಹಾಗೂ ಕಳ್ಳ ಸಾಗಾಣಿಕೆ ವಿರೋಧಿ ದಿನಾಚರಣೆ ಅಂಗವಾಗಿ ನಗರದಲ್ಲಿ ಜಾಗೃತಿ ಜಾಥಾ ಆಯೋಜಿಸಲಾಗಿತ್ತು.
ಬಳ್ಳಾರಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಹಯೋಗದಲ್ಲಿ ಆಯೋಜಿಸಿದ್ದ ಜಾಗೃತಿ ಜಾಥಕ್ಕೆ ತಾಲೂಕು ವೈದ್ಯಾಧಿಕಾರಿ (THO) ಡಾ.ಅರುಣ್ ರವರು ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಡಾ.ಅರುಣ್ ರವರು, ಇಂದಿನ ಯುವ ಶಕ್ತಿ ಹಲವು ರೀತಿಯ ಆಕರ್ಷಣೆಗಳಿಂದ ಮಾದಕ ವಸ್ತುಗಳ ಸೇವನೆಯ ದುಶ್ಚಟಕ್ಕೆ ಬಲಿಯಾಗುತ್ತಿರುವುದು ತುಂಬಾ ವಿಷಾದನೀಯ. ಇದು ಜೀವಕ್ಕೆ ಹಾನಿ ಉಂಟು ಮಾಡುವುದರ ಜೊತೆಗೆ, ಸಮಾಜದ ಸ್ವಾಸ್ಥ್ಯ ಹಾಳುಮಾಡುತ್ತದೆ. ಇವುಗಳ ಸೇವನೆ, ಸಾಗಣೆ, ಮಾರಾಟ ಮಾಡುವುದು ಅಪರಾಧವಾಗಿದ್ದು, ಅದರ ಸೇವನೆಯಿಂದಾಗುವ ದುಷ್ಪರಿಣಾಮಗಳ ಬಗ್ಗೆ ನಿರಂತರವಾಗಿ ಜಾಗೃತಿ ಮೂಡಿಸಬೇಕು. ಮಾದಕ ವಸ್ತುಗಳ ನಿಷೇಧಕ್ಕೆ ಕೇವಲ ಕಾಯ್ದೆ-ಕಾನೂನುಗಳ ಮೂಲಕ ಮಾತ್ರ ಸಾಧ್ಯವಾಗದೆ, ಅದಕ್ಕೆ ಎಲ್ಲರ ಸಹಕಾರ ಅಗತ್ಯವಾಗಿದೆ ಎಂದರು.
ಇನ್ನು ಈ ಕಾರ್ಯಕ್ರಮದಲ್ಲಿ ಡಾ. ಮಲ್ಲೇಶಪ್ಪ, ಕೆ. ಶೋಭಾ ಬಿ.ಎಚ್.ಈ.ಓ,ಪಿ .ಬಸವರಾಜ್ ಅಧಿಕಾರಿಗಳು ,ಈರಣ್ಣ ಎಸ್‌ಟಿಎಸ್, ಚನ್ನಬಸವರಾಜ್ ಹೆಚ್ಐ ಓ, ಪ್ರಕಾಶ್ ಗೌಡರ್ ನೇತ್ರಾಧಿಕಾರಿ, ನಾಗರಾಜ್ ಎಸ್.ಡಿ.ಎ,ದೇವಣ್ಣ ಶುಶ್ರೂಷಕರು ಹಾಗೂ ಮಂಜುನಾಥ್ ಆರ್ ಕೆ ಎಸ್ ಕೆ ಆಪ್ತ ಸಮಾಲೋಚಕರು,ಎಲ್ಲಾ ಆರೋಗ್ಯ ಇಲಾಖೆಯ ಸಿಬ್ಬಂದಿ ವರ್ಗದವರು ಹಾಗೂ ಆಶಾ ಕಾರ್ಯಕರ್ತರು ಪಾಲ್ಗೊಂಡಿದ್ದರು.
ರಘುವೀರ್, ಸಿದ್ದಿ ಟಿವಿ, ಕಂಪ್ಲಿ