ವಿಎಸ್ ಕೆಯು ಸಿಂಡಿಕೇಟ್ ಸದಸ್ಯರಾಗಿ ಶಿವಕುಮಾರ್ ನೇಮಕ
ಕಂಪ್ಲಿ: ಬಳ್ಳಾರಿಯ ವಿಜಯನಗರ ಶ್ರೀಕೃಷ್ಣ ದೇವರಾಯ ವಿಶ್ವವಿದ್ಯಾಲಯಕ್ಕೆ ಕಂಪ್ಲಿ ತಾಲೂಕಿನ ದೇವಲಾಪುರ ಗ್ರಾಮದ ವಕೀಲರಾದ ಕೆ. ಶಿವ ಕುಮಾರ್ ರವರು ಕರ್ನಾಟಕ ಸರ್ಕಾರದಿಂದ ನೇಮಕವಾಗಿದ್ದಾರೆ,
ವಕೀಲ ಶಿವ ಕುಮಾರ್ ಕೆ ಇವರು ದೇವಲಾಪುರ ಗ್ರಾಮದ ದಿವಂಗತ ಕೆ. ಚನ್ನಮೂರ್ತಿಯವರ ಹಿರಿಯ ಪುತ್ರರಾಗಿದ್ದು ದೇವಲಾಪುರ ಗ್ರಾಮದಲ್ಲಿ ನೇತಾಜಿ ಶಿಕ್ಷಣ ಸಂಸ್ಥೆಯಿಂದ ಶಾಲಾ ನಡೆಸುತ್ತಿದ್ದು ಇವರು ಭಾರತೀಯ ದಲಿತ ಪ್ಯಾಂಥರ್ ಸಂಘಟನೆಯ ಬಳ್ಳಾರಿಯ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ಜಿಲ್ಲೆಯಲ್ಲಿ ಹಲವಾರು ಸಾಮಾಜಿಕ ಹೋರಾಟಗಳು ಸೇರಿದಂತೆ ಸಮಾಜ ಸೇವೆ ಸಲ್ಲಿಸುತ್ತಾ ಬಂದಿರುತ್ತಾರೆ, ಇವರ ಸಮಾಜ ಸೇವೆಯನ್ನು ಪರಿಗಣಿಸಿ ನವದೆಹಲಿಯಲ್ಲಿ ಭಾರತೀಯ ದಲಿತ ಸಾಹಿತ್ಯ ಅಕಾಡೆಮಿ ವತಿಯಿಂದ ಡಾ. ಬಿ.ಆರ್. ಅಂಬೇಡ್ಕರ್ ನ್ಯಾಷನಲ್ ಫೆಲೋಷಿಪ್ ಪ್ರಶಸ್ತಿ ನೀಡಿ ಗೌರವಿಸಿರುತ್ತಾರೆ ಅಲ್ಲದೆ ಬಳ್ಳಾರಿ ಜಿಲ್ಲಾ ಜಾಗೃತಿ ಮತ್ತು ಮೇಲುಸ್ತುವಾರಿ ಸಮಿತಿ ಸದಸ್ಯರಾಗಿ ಸೇವೆ ಸಲ್ಲಿಸುತ್ತಾ ಬಂದಿರುತ್ತಾರೆ ಪ್ರಸ್ತುತ ಇವರ ಶಿಕ್ಷಣ ಮತ್ತು ಸಮಾಜ ಸೇವೆಯನ್ನು ಪರಿಗಣಿಸಿ ಕರ್ನಾಟಕ ಸರ್ಕಾರವು ಬಳ್ಳಾರಿಯ ವಿಜಯನಗರ ಶ್ರೀಕೃಷ್ಣ ದೇವರಾಯ ವಿಶ್ವವಿದ್ಯಾಲಯಕ್ಕೆ ಸಿಂಡಿಕೇಟ್ ಸದಸ್ಯರನ್ನಾಗಿ ನೇಮಕ ಮಾಡಿರುತ್ತದೆ,
ಭಾರತೀಯ ದಲಿತ ಪ್ಯಾಂಥರ್ ಸಂಘಟನೆಯ ರಾಜ್ಯ ಪ್ರಧಾನ ಕಾರ್ಯದರ್ಶಿ ಡಾ.ಎ.ಸಿ. ದಾನಪ್ಪನವರು ಮತ್ತು ಕರ್ನಾಟಕ ರಾಜ್ಯ ಪೊಲೀಸ್ ದೂರುಗಳ ಪ್ರಾಧಿಕಾರದ ಸದಸ್ಯರಾದ ಮೋಹನ್ ಕುಮಾರ್ ದಾನಪ್ಪನವರು ಅಭಿನಂದಿಸಿರುತ್ತಾರೆ