Kampli : ಪುರಸಭೆ ಅಧ್ಯಕ್ಷ, ಉಪಧ್ಯಕ್ಷ ಸ್ಥಾನದ ಚುನಾವಣೆ : ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ : ಅರ್ಜಿ ವಿಚಾರಣೆ ನಾಳೆಗೆ ಮುಂದೂಡಿಕೆ


ಕಂಪ್ಲಿ ಪುರಸಭೆ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆ : ಧಾರವಾಡ ಹೈಕೋರ್ಟ್ ಮಧ್ಯಂತರ ಸ್ಟೇ

ಮಧ್ಯಂತರ ತಡೆಯಾಜ್ಞೆಯ  ಅರ್ಜಿ ವಿಚಾರಣೆ ಇಂದು ನಡೆಯಬೇಕಿತ್ತು

ಅರ್ಜಿ ವಿಚಾರಣೆ ನಾಳೆಗೆ ಮುಂದೂಡಿಕೆಯಾಗಿದೆ 

ಕಂಪ್ಲಿ :  ಸರ್ಕಾರ ಇತ್ತೀಚೆಗೆ ಹೊರಡಿಸಿದ್ದ ಮೀಸಲಾತಿ ಪಟ್ಟಿಯಲ್ಲಿ ಪುರಸಭೆಯ ಅಧ್ಯಕ್ಷ ಸ್ಥಾನ ಸಾಮಾನ್ಯ ವರ್ಗಕ್ಕೆ ಮತ್ತು ಉಪಾಧ್ಯಕ್ಷ ಸ್ಥಾನ ಸಾಮಾನ್ಯ (ಮಹಿಳೆ)ಕ್ಕೆ ಸಿಕ್ಕಿತ್ತು. ಆಗಷ್ಟ್ 21ಕ್ಕೆ ಚುನಾವಣೆ ನಿಗದಿಯಾಗಿತ್ತು. ಸರದಿ(ರೊಟೆಶನ್) ಪ್ರಕಾರ ಪುರಸಭೆ ಅಧ್ಯಕ್ಷ ಸ್ಥಾನ ಪರಿಶಿಷ್ಟ ಪಂಗಡಕ್ಕೆ ಮೀಸಲಾಗಬೇಕಿತ್ತು ಎಂದು ಪುರಸಭೆ ಸದಸ್ಯ ಎನ್. ರಾಮಾಂಜನೇಯಲು ಧಾರವಾಡ ಹೈಕೋರ್ಟ್‌ಗೆ ಪೂರಕ ದಾಖಲೆ ಸಲ್ಲಿಸಿದ್ದರು. ಹೈಕೋರ್ಟ್‌ ಪರಿಶೀಲನೆ ಬಳಿಕ ತಡೆಯಾಜ್ಞೆ ನೀಡಿ, ಮುಂದಿನ ವಿಚಾರಣೆ ಇಂದು(28-08-24) ನಿಗದಿಯಾಗಿತ್ತು, ವಿಚಾರಣೆಯನ್ನು ನಾಳೆಗೆ(29-08-24) ಮುಂದೂಡಿಕೆಯಾಗಿದೆ ಎಂದು ಮೂಲಗಳು ತಿಳಿಸಿವೆ.

Previous Post Next Post

AD

 


Contact For News&Ads

Siddi TV

Contact Form

f="https://unpkg.com/video.js/dist/video-js.css" rel="stylesheet">