Political: ಕರ್ನಾಟಕ ಸಿಎಂ ಭೇಟಿಯಾದ ಆಂಧ್ರ ಡಿಸಿಎಂ ಶ್ರೀ ಪವನ್ ಕಲ್ಯಾಣ್


 ಕರ್ನಾಟಕ ಸಿಎಂ ಭೇಟಿಯಾದ ಆಂಧ್ರ ಡಿಸಿಎಂ ಶ್ರೀ ಪವನ್ ಕಲ್ಯಾಣ್

ಸಿದ್ದರಾಮಯ್ಯ - ಪವನ್ ಕಲ್ಯಾಣ್ ಮಾತುಕತೆ, ತೀವ್ರ ಕುತೂಹಲ

ಬೆಂಗಳೂರು : ಜನಸೇನಾ ಪಕ್ಷದ ಮುಖ್ಯಸ್ಥ, ಆಂಧ್ರ ಪ್ರದೇಶದ ಉಪಮುಖ್ಯಮಂತ್ರಿ ಪವನ್ ಕಲ್ಯಾಣ್ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ ಮಾಡಿದರು. ಆಂಧ್ರ ಪ್ರದೇಶದಲ್ಲಿ ನೂತನ ಸರ್ಕಾರ ಅಸ್ತಿತ್ವಕ್ಕೆ ಬಂದ ಬಳಿಕ ಮೊದಲ ಬಾರಿಗೆ ಪವನ್ ಕಲ್ಯಾಣ್ ಪಕ್ಕದ ರಾಜ್ಯದ ಮುಖ್ಯಮಂತ್ರಿಗಳನ್ನು ಭೇಟಿಯಾದರು.

ಗುರುವಾರ ಮುಖ್ಯಮಂತ್ರಿ ಸಿದ್ದರಾಮಯ್ಯರನ್ನು ಗೃಹ ಕಛೇರಿ ಕೃಷ್ಣದಲ್ಲಿ ಆಂಧ್ರ ಪ್ರದೇಶದ ಉಪಮುಖ್ಯಮಂತ್ರಿ, ಜನಸೇವಾ ಪಕ್ಷದ ನಾಯಕ ಪವನ್ ಕಲ್ಯಾಣ್ ಭೇಟಿಯಾಗಿ ಮಾತುಕತೆ ನಡೆಸಿದರು. ಈ ಭೇಟಿ ಕುತೂಹಲಕ್ಕೆ ಕಾರಣವಾಗಿದೆ.

2024ರ ವಿಧಾಸನಭೆ ಚುನಾವಣೆ ಬಳಿಕ ಆಂಧ್ರ ಪ್ರದೇಶದಲ್ಲಿ ತೆಲುಗು ದೇಶಂ ಪಕ್ಷ (ಟಿಡಿಪಿ), ಪವನ್ ಕಲ್ಯಾಣ್ ನೇತೃತ್ವದ ಜನಸೇನಾ ಪಕ್ಷ, ಬಿಜೆಪಿ ಮೈತ್ರಿಕೂಟದ ಸರ್ಕಾರ ರಚನೆಯಾಗಿದೆ. ಚಂದ್ರಬಾಬು ನಾಯ್ಡು ಮುಖ್ಯಮಂತ್ರಿ, ಪವನ್ ಕಲ್ಯಾಣ್ ಉಪ ಮುಖ್ಯಮಂತ್ರಿ.

ಮೊದಲ ಬಾರಿಗೆ ಶಾಸಕರಾದ ಪವನ್ ಕಲ್ಯಾಣ್ ಉಪ ಮುಖ್ಯಮಂತ್ರಿ ಹುದ್ದೆಯನ್ನು ಪಡೆದಿದ್ದಾರೆ. ಅಲ್ಲದೇ ಅವರು ಪಂಚಾಯತ್ ರಾಜ್, ಗ್ರಾಮೀಣಾಭಿವೃದ್ಧಿ ಮತ್ತು ಗ್ರಾಮೀಣ ನೀರು ಸರಬರಾಜು. ಪರಿಸರ ಮತ್ತು ಅರಣ್ಯ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಖಾತೆಯ ಸಚಿವರೂ ಹೌದು.

2024ರ ಲೋಕಸಭೆ ಚುನಾವಣೆಯ ಜೊತೆಗೆ ಆಂಧ್ರ ಪ್ರದೇಶದಲ್ಲಿ ವಿಧಾನಸಭೆ ಚುನಾವಣೆ ನಡೆಯಿತು. ಚುನಾವಣೆಯಲ್ಲಿ ಟಿಡಿಪಿ 135, ಜನಸೇನಾ ಪಕ್ಷ 21, ವೈಎಸ್‌ಆರ್‌ಸಿಪಿ 11, ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಗಳಿಸಿವೆ.

ಟಿಡಿಪಿ, ಜನಸೇನಾ ಮತ್ತು ಬಿಜೆಪಿ ಪಕ್ಷಗಳು ಚುನಾವಣಾ ಪೂರ್ವ ಮೈತ್ರಿ ಮಾಡಿಕೊಂಡಿದ್ದವು. ಆದ್ದರಿಂದ ಮುಖ್ಯಮಂತ್ರಿಯಾದ ಚಂದ್ರಬಾಬು ನಾಯ್ಡು ಸಂಪುಟಕ್ಕೆ ಜನಸೇನಾ ಪಕ್ಷದ ಮೂವರು ಶಾಸಕರನ್ನು ಸೇರಿಸಿಕೊಳ್ಳಲಾಗಿದೆ. ಬಿಜೆಪಿಯ ಇಬ್ಬರು ಶಾಸಕರಿಗೆ ಸಚಿವ ಸ್ಥಾನ ನೀಡಲಾಗಿದೆ.

ಸಭೆಗೆ ಆಗಮಿಸಿರುವ ಪವನ್ ಕಲ್ಯಾಣ್: ಆನೆ ಹಾವಳಿ ತಡೆಗಟ್ಟುವ ಸಂಬಂಧ ವಿಧಾನಸೌಧದಲ್ಲಿ ನಡೆಯುವ ಸಭೆಗಾಗಿ ಪರಿಸರ ಮತ್ತು ಅರಣ್ಯ ಖಾತೆ ಸಚಿವ ಪವನ್ ಕಲ್ಯಾಣ್ ಕರ್ನಾಟಕ್ಕೆ ಆಗಮಿಸಿದ್ದಾರೆ. ರಾಜ್ಯದ ಅರಣ್ಯ ಸಚಿವ ಈಶ್ವರ ಖಂಡ್ರೆ ಅಧ್ಯಕ್ಷತೆಯಲ್ಲಿ ಈ ಸಭೆ ನಡೆಯುತ್ತಿದೆ.

ಕರ್ನಾಟಕ ದಕ್ಷಿಣ ಭಾರತದಲ್ಲಿ ಹೆಚ್ಚು ಆನೆಗಳಿರುವ ರಾಜ್ಯ. 2022-23ರಲ್ಲಿ ನಡೆದ ಆನೆಗಳ ಗಣತಿ ಬಳಿಕ ಆನೆಗಳ ಸಂಖ್ಯೆಯಲ್ಲಿ ಕರ್ನಾಟಕವೇ ಮೊದಲ ಸ್ಥಾನದಲ್ಲಿದೆ. ರಾಜ್ಯದಲ್ಲಿ 6,395 ಆನೆಗಳಿವೆ. ಪ್ರತಿ 5 ವರ್ಷಗಳಿಗೊಮ್ಮೆ ಆನೆಗಳ ಗಣತಿ ನಡೆಸಲಾಗುತ್ತದೆ. ಆದರೆ ಈ ವರ್ಷದ ಮೇ ತಿಂಗಳಿನಲ್ಲಿ ಮೂರು 02 ದಿನಗಳ ಕಾಲ ಕರ್ನಾಟಕದ ಜೊತೆ ಗಡಿ ಹಂಚಿಕೊಂಡಿರುವ 4 ರಾಜ್ಯಗಳಲ್ಲಿ ಆನೆಗಳ ವಿಶೇಷ ಗಣತಿಯನ್ನು ನಡೆಸಲಾಗಿತ್ತು. ಗಡಿಭಾಗದಲ್ಲಿ ಆನೆಗಳ ಹಾವಳಿ ತಡೆಗೆ ಕೈಗೊಳ್ಳಲು ಈ ವಿಶೇಷ ಗಣತಿ ನಡೆದಿತ್ತು.

ಕರ್ನಾಟಕ, ತಮಿಳುನಾಡು, ಕೇರಳ, ತೆಲಂಗಾಣ ಮತ್ತು ಆಂಧ್ರ ಪ್ರದೇಶ ರಾಜ್ಯಗಳ ಗಡಿಗಳಲ್ಲಿ ವಿಶೇಷವಾಗಿ ಆನೆಗಳ ಗಣತಿಯನ್ನು ಮೇ 23 ರಿಂದ 25ರ ತನಕ ನಡೆಸಲಾಗಿತ್ತು. ಈಗ ಗಣ- ತಿಯ ವರದಿ ಅನ್ವಯ ಗಡಿಯಲ್ಲಿ ಆನೆಗಳ ಹಾವಳಿ ತಡೆಯಲು ಕೈಗೊಳ್ಳಬೇಕಾದ ಕ್ರಮಗಳ ಕುರಿತು ಚರ್ಚಿಸಲು ಸಭೆ ನಡೆಸಲಾಗುತ್ತಿದೆ.

Previous Post Next Post

AD

 


Contact For News&Ads

Siddi TV

Contact Form

f="https://unpkg.com/video.js/dist/video-js.css" rel="stylesheet">