ಅಕ್ಕಮಹಾದೇವಿ ಮಹಿಳಾ ಮಂಡಳಿ ವತಿಯಿಂದ ಉಚಿತ ಕಣ್ಣಿನ ತಪಾಸಣಾ ಶಿಬಿರ
ಕಂಪ್ಲಿ : ನಗರದ ಸಾಂಗತ್ರಯ ಪಾಠಶಾಲಾ ಆವರಣದಲ್ಲಿ ನಿನ್ನೆ ಅಕ್ಕಮಹಾದೇವಿ ಮಹಿಳಾ ಮಂಡಳಿ ವತಿಯಿಂದ ಆಯೋಜಿಸಲಾಗಿದ್ದ ಉಚಿತ ಕಣ್ಣಿನ ತಪಾಸಣಾ ಶಿಬಿರ ಕಾರ್ಯಕ್ರಮಕ್ಕೆ ತಹಶಿಲ್ದಾರ್ ಶಿವರಾಜ್ ಶಿವಪುರ ರವರು ಚಾಲನೆ ನೀಡಿದರು.
ಚಾಲನೆ ನೀಡಿ ಮಾತನಾಡಿದ ತಹಶಿಲ್ದಾರ್ ಶಿವರಾಜ್ ರವರು,ಹೊಸಪೇಟೆಯ ಐದೃಷ್ಠಿ ಕಣ್ಣಿನ ಆಸ್ಪತ್ರೆ ಹಾಗೂ ಕಂಪ್ಲಿಯ ಅಕ್ಕಮಹಾದೇವಿ ಮಹಿಳಾ ಮಂಡಳಿ ಸಂಯುಕ್ತ ಆಶ್ರಯದಲ್ಲಿ ನಡೆದ ಉಚಿತ ಕಣ್ಣಿನ ತಪಾಸಣಾ ಶಿಬಿರದಿಂದ ಸಾರ್ವಜನಿಕರು ಸದುಪಯೋಗಪಡಿಸಿಕೊಳ್ಳಬೇಕು ಹಾಗೂ ಈ ಕಾರ್ಯಕ್ರಮದಿಂದ ಆರ್ಥಿಕವಾಗಿ ಹಿಂದುಳಿದ ಜನರಿಗೆ ಹಾಗೂ ಹಿರಿಯ ನಾಗರಿಕರಿಗೆ ಉಪಯೋಗವಾಗುವುದು ಎಂದು ಹೇಳಿದರು..
ಈ ಸಂದರ್ಭದಲ್ಲಿ ಐದೃಷ್ಠ ಕಣ್ಣಿನ ಆಸ್ಪತ್ರೆಯ ಸಿಬ್ಬಂದಿಗಳು, ಅಕ್ಕಮಹಾದೇವಿ ಮಹಿಳಾ ಮಂಡಳಿ ಸದಸ್ಯರು ಹಾಗೂ ಸಾರ್ವಜನಿಕರು ಭಾಗಿಯಾಗಿದ್ದರು.
Tags
ಟಾಪ್ ನ್ಯೂಸ್