Kampli : ಸತತ ಪ್ರಯತ್ನದಿಂದ ಸಾಧನೆ ಸಾಧ್ಯ : ಶಾಸಕ ಗಣೇಶ್


ಸತತ ಪ್ರಯತ್ನದಿಂದ ಸಾಧನೆ ಸಾಧ್ಯ  : ಶಾಸಕ ಗಣೇಶ್

 ಎಸ್.ಎನ್ ಪೇಟೆ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ ಕಾರ್ಯಕ್ರಮ ನಿವೇದಿತಾ ಆಂಗ್ಲ ಮಾಧ್ಯಮ ಶಾಲೆಯ ಆವರಣದಲ್ಲಿ ಆಯೋಜಿಸಲಾಗಿತ್ತು.

ಈ  ಕಾರ್ಯಕ್ರಮವನ್ನು  ಶಾಸಕ ಜೆ.ಎನ್. ಗಣೇಶ್ ಚಾಲನೆ ನೀಡಿ, ಮಾತನಾಡಿ ಸತತ ಪ್ರಯತ್ನದಿಂದ ಮಾತ್ರ ಸಾಧನೆ ಸಾಧ್ಯ, ಪರಿಶ್ರಮ ಇಲ್ಲದೇ ಯಾವುದೇ ಮಕ್ಕಳಾಗಲಿ ಶಿಕ್ಷಕರಾಗಲಿ ಏನನ್ನು ಸಾಧಿಸಲು ಸಾಧ್ಯವಿಲ್ಲ, ಮಕ್ಕಳಿಗೆ ಒಳ್ಳೆಯ ಮಾರ್ಗದರ್ಶನ ನೀಡುವುದರ ಜೊತೆಗೆ ಮಕ್ಕಳಲ್ಲಿರುವ ಪ್ರತಿಭೆಯನ್ನು ಗುರುತಿಸಿ ಶಿಕ್ಷಕರು ಬಹಳಷ್ಟು ಅಚ್ಚುಕಟ್ಟಾಗಿ ಇಂತಹ ಕಾರ್ಯಕ್ರಮಗಳನ್ನು ಮಾಡಬೇಕು ಪ್ರತಿಯೊಂದು ಮಕ್ಕಳಲ್ಲಿ ಒಂದೊಂದು ಅದ್ಭುತ ಕಲೆ ಇರುತ್ತದೆ ಅದನ್ನು ಹೊರತೆಗೆಯುವ ಕಾರ್ಯ ಶಿಕ್ಷಕರಿಂದ ಆಗಬೇಕು.ಇಂದಿನ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿಯಂತೆ ಸಿದ್ದಗೊಂಡಿರುವುದು ನಿಜಕ್ಕೂ ಶ್ಲಾಘನೀಯ.ಈ ಉತ್ತಮ ಕಾರ್ಯಕ್ರಮವನ್ನು ಆಯೋಜಿಸಿದ  ಸಹೋದರ ಮರಿಯಪ್ಪನರವರ ಕಾರ್ಯ ಶ್ಲಾಘನೀಯ ಎಂದರು.

ನಂತರ  ಕ್ಷೇತ್ರ ಶಿಕ್ಷಣಾಧಿಕಾರಿ ಸಿದ್ದಲಿಂಗಯ್ಯ ಮೂರ್ತಿ ಅವರು ಮಾತನಾಡಿ ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಇಂಥ ಕಾರ್ಯಕ್ರಮ ಅತ್ಯಮೂಲ್ಯ  ಮಕ್ಕಳ ಪ್ರತಿಭೆಯನ್ನು ಗುರುತಿಸಿ  

ತೀರ್ಪುಗಾರರು ಮಕ್ಕಳಿಗೆ ನ್ಯಾಯವಾದ ತೀರ್ಪನ್ನು ನೀಡಬೇಕು.ಮಕ್ಕಳ ಸರ್ವತೋಮುಖ ಅಭಿವೃದ್ಧಿಗೆ ಪ್ರತಿಭಾ ಕಾರಂಜಿ, ಮಕ್ಕಳ ಮೇಳ, ಕ್ರೀಡಾ ಕಾರ್ಯಕ್ರಮಗಳನ್ನು ಆಯೋಜಿಸುತ್ತಿದೆ. ಇಲ್ಲಿ ಮಕ್ಕಳು ತಮ್ಮಲ್ಲಿರುವ ಕಲೆ, ಸಾಹಿತ್ಯ, ಜಾನಪದ ಪ್ರಕಾರದ ಪ್ರತಿಭೆಯನ್ನು ತೋರಿ ಸಾಂಸ್ಕೃತಿಕವಾಗಿ ಮುಂದೆ ಬರಬೇಕು ಎಂದರು.

ಇದೇ ಸಂದರ್ಭದಲ್ಲಿ ನಿವೇದಿತ ಆಂಗ್ಲ ಮಾಧ್ಯಮ ಶಾಲೆ ಆಡಳಿತ ಮಂಡಳಿ ವತಿಯಿಂದ ಶಾಸಕ ಜೆ.ಎನ್. ಗಣೇಶ್ ರವರಿಗೆ ಹಾಗೂ ಬಿಇಓ ಸಿದ್ದಲಿಂಗಯ್ಯ ಮೂರ್ತಿ ಗೌರವಿತ ಸನ್ಮಾನವನ್ನು ಸಲ್ಲಿಸಲಾಯಿತು.

ಜಾನಪದ ನೃತ್ಯ, ಕೋಲಾಟ, ದೇಶಭಕ್ತಿ, ಅಭಿನಯ ಗೀತೆ, ರಸ ಪ್ರಶ್ನೆ, ಧಾರ್ಮಿಕ ಪಠಣ , ಕಂಠಪಾಠ ಪದ್ಯಗಳು ಹಾಗೂ ಇನ್ನಿತರ ಸ್ಪರ್ಧೆಗಳಲ್ಲಿ ಅತ್ಯಂತ  ಲವಲವಿಕೆಯಿಂದ  ಪಾಲ್ಗೊಂಡರು.

ನಂತರ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. 

ಬಹುಮಾನ ಪಡೆದ ವಿದ್ಯಾರ್ಥಿಗಳು  ವೇದಿಕೆಯಲ್ಲಿ  ಪೋಟೋ ತೆಗೆಸಿಕೊಂಡು ಖುಷಿಪಟ್ಟರು.

ಈ ಸಂದರ್ಭದಲ್ಲಿ ನಿವೇದಿತಾ ಆಂಗ್ಲ ಮಾಧ್ಯಮ ಶಾಲೆಯ ಕಾರ್ಯದರ್ಶಿ ಕೆ.ರಾಮು, ಮುಖ್ಯಗುರುಗಳಾದ ಮರಿಯಪ್ಪ, CRP ರೇಣುಕಾರಾಧ್ಯ, ಹನುಮಂತಪ್ಪ, ತಾಲೂಕು ಪಂಚಾಯತಿ, ಮಲ್ಲನಗೌಡ  ಪುರಸಭೆ ಸದಸ್ಯ ಸುದರ್ಶನ್ ರೆಡ್ಡಿ  ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಮತ್ತು ಎಲ್ಲಾ ಶಾಲೆಯ ಶಿಕ್ಷಕರು ಮಕ್ಕಳು ಉಪಸ್ಥಿತರಿದ್ದರು.

Previous Post Next Post

AD

 


Siddi TV

Contact Form

f="https://unpkg.com/video.js/dist/video-js.css" rel="stylesheet">