ಪರಿಸರ ಸ್ನೇಹಿ ದೀಪಾವಳಿ ಹಬ್ಬ ಆಚರಿಸಲು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಸೂಚನೆ
ಬಳ್ಳಾರಿ : ದೀಪಾವಳಿ ಹಬ್ಬದ ಸಮಯದಲ್ಲಿ ಸಾರ್ವಜನಿಕರು ನಿಷೇಧಿತ ಪಟಾಕಿ, ಸಿಡಿಮದ್ದುಗಳನ್ನು ಬಿಟ್ಟು ಹಸಿರು ಪಟಾಕಿಯನ್ನು ಬಳಸುವ ಮೂಲಕ ಪರಿಸರ ಸ್ನೇಹಿ ದೀಪಾವಳಿ ಹಬ್ಬವನ್ನು ಆಚರಿಸಬೇಕು ಎಂದು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಮನವಿ ಮಾಡಿದ್ದಾರೆ.
ಜಿಲ್ಲೆಯಲ್ಲಿ ದೀಪಾವಳಿ ಹಬ್ಬದ ಸಮಯದಲ್ಲಿ ಹಸಿರು ಪಟಾಕಿಗಳನ್ನು ಹೊರತುಪಡಿಸಿ ಉಳಿದ ಯಾವುದೇ ರೀತಿಯ ಇತರೆ ಪಟಾಕಿಗಳ ಮಾರಾಟ ಮತ್ತು ಬಳಕೆ ನಿಷೇಧಿಸಲಾಗಿದೆ.
ಹಸಿರು ಪಟಾಕಿಗಳನ್ನು ದೀಪಾವಳಿ ಹಬ್ಬದ ದಿನದ ರಾತ್ರಿ 08 ಗಂಟೆಯಿಂದ 10 ಗಂಟೆಯವರೆಗೆ ಮಾತ್ರ ಬಳಸಿ ಪರಿಸರ ಸ್ನೇಹಿ ಹಬ್ಬವನ್ನು ಆಚರಿಸಬೇಕು ಎಂದು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
----------
Tags
ಟಾಪ್ ನ್ಯೂಸ್