Kampli :ಬುಧವಾರ ಕಂಪ್ಲಿಗೆ ಭೇಟಿ ನೀಡಲಿರುವ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಬಿ.ಜೆಡ್.ಜಮೀರ್ ಅಹ್ಮದ್ ಖಾನ್


ಬಳ್ಳಾರಿ : ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು ಹಾಗೂ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಬಿ.ಜೆಡ್.ಜಮೀರ್ ಅಹ್ಮದ್ ಖಾನ್ ಅವರು ಅ.09 ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳುವರು.

ಅ.09 ರಂದು ಬೆಳಿಗ್ಗೆ ಹೊಸಪೇಟೆಯಿಂದ ಹೊರಟು, ಬೆಳಿಗ್ಗೆ 10.15 ಕ್ಕೆ ಕಂಪ್ಲಿ ಗೆ ಆಗಮಿಸುವರು. ನಂತರ ಕಂಪ್ಲಿ ಶಾಸಕರು ಆಯೋಜಿಸಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸುವರು.

ಬಳಿಕ ಮಧ್ಯಾಹ್ನ 02.30 ಗಂಟೆಯಿಂದ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಜಿಲ್ಲೆಯ ಕೆಡಿಪಿ ಪ್ರಗತಿ ಪರಿಶೀಲನಾ ಸಭೆ ನಡೆಸುವರು.  ಸಚಿವರು ಸಂಜೆ 06.30 ಗಂಟೆಗೆ ಬಳ್ಳಾರಿಯಿಂದ ಹೊಸಪೇಟೆಗೆ ತೆರಳುವರು ಎಂದು ಸಚಿವರ ಆಪ್ತ ಕಾರ್ಯದರ್ಶಿ ತಿಳಿಸಿದ್ದಾರೆ.


Previous Post Next Post

AD

 


Contact For News&Ads

Siddi TV

Contact Form

f="https://unpkg.com/video.js/dist/video-js.css" rel="stylesheet">