Manmohan Singh: ಮಾಜಿ ಪ್ರಧಾನಿ ಮನ್‌ಮೋಹನ್‌ ಸಿಂಗ್‌ ಇನ್ನಿಲ್ಲ! ಆರ್ಥಿಕ ಚತುರ ಇನ್ನೂ ನೆನಪು ಮಾತ್ರ!


Manmohan Singh: ಮಾಜಿ ಪ್ರಧಾನಿ ಮನ್‌ಮೋಹನ್‌ ಸಿಂಗ್‌ ಇನ್ನಿಲ್ಲ! ಆರ್ಥಿಕ ಚತುರ ಇನ್ನೂ ನೆನಪು ಮಾತ್ರ!

Manmohan Singh: ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಮನಮೋಹನ್‌ ಸಿಂಗ್‌ ಕೊನೆಯುಸಿರೆಳೆದಿದ್ದಾರೆ. ಆಸ್ಪತ್ರೆಗೆ ಸೇರಿಸುವಾಗಲೇ ಅವರ ಸ್ಥಿತಿ ಚಿಂತಾಜನಕವಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ (Farmer PM Manmohan Singh) ಕೊನೆಯುಸಿರೆಳೆದಿದ್ದಾರೆ. 92ನೇ ವಯಸ್ಸಿನಲ್ಲಿ ಮನಮೋಹನ್‌ ಸಿಂಗ್‌ ವಯೋಸಹಜ ಕಾಯಿಲೆಯಿಂದ ಮೃತಪಟ್ಟಿದ್ದಾರೆ. ದೆಹಲಿ ಏಮ್ಸ್‌ (Delhi Aims) ಆಸ್ಪತ್ರೆಗೆ ಇಂದು ರಾತ್ರಿ ಮನಮೋಹನ್‌ ಸಿಂಗ್‌ ಅವರನ್ನು ದಾಖಲಿಸಲಾಗಿತ್ತು. ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಮನಮೋಹನ್‌ ಸಿಂಗ್‌ ಕೊನೆಯುಸಿರೆಳೆದಿದ್ದಾರೆ. ಆಸ್ಪತ್ರೆಗೆ ಸೇರಿಸುವಾಗಲೇ ಅವರ ಸ್ಥಿತಿ ಚಿಂತಾಜನಕವಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.

ಮನಮೋಹನ್‌ ಸಿಂಗ್ ಇನ್ನಿಲ್ಲ!

ಭಾರತದ ಆರ್ಥಿಕ ಉದಾರೀಕರಣದ ವಾಸ್ತುಶಿಲ್ಪಿ ಎಂಬ ಬಿರುದನ್ನು ಗಳಿಸಿದವರು ಮನಮೋಹನ್‌ಸಿಂಗ್. ಕಾಂಗ್ರೆಸ್‌ ರಾಜಕೀಯಕ್ಕೆ ಪಾದಾರ್ಪಣೆ ಮಾಡಿದ್ದರು. ಕಾಂಗ್ರೆಸ್‌ನಿಂದಲೇ ಪ್ರಧಾನ ಮಂತ್ರಿ ಕೂಡ ಆಗಿದ್ದರು. 10 ವರ್ಷಗಳ ಭಾರತದ ಪ್ರಧಾನಿಯಾಗಿ ಸೇವೆ ಸಲ್ಲಿಸಿದರು. ಈ ಅವಧಿಯಲ್ಲಿ ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌‌ ಭಾರತದ ಆರ್ಥಿಕತೆಯನ್ನು ಪುನರುಜ್ಜೀವನಗೊಳಿಸಿದ್ದರಿ. ಉದಾರೀಕರಣಗೊಳಿಸುವ ಗುರಿಯನ್ನು ಹೊಂದಿದ್ದರು.

ರಾಜಕೀಯ ಗಣ್ಯರ ಕಂಬನಿ!

ಇನ್ನೂ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಇನ್ನಿಲ್ಲ ಅನ್ನೋ ಸುದ್ದಿ ತಿಳಿಯುತ್ತಿದ್ದಂತೆ ರಾಜಕೀಯ ಗಣ್ಯರು ಸಂತಾಪ ಸೂಚಿಸಿದ್ದಾರೆ.ಯುಪಿಎಯ ಎರಡು ಅವಧಿಯ ಪ್ರಧಾನಿಯಾಗಿ ಅವರು (2004 ಮತ್ತು 2014) ಸೇವೆ ಸಲ್ಲಿಸಿದರು. ಈ ವರ್ಷದ (2024) ಆರಂಭದ ವರೆಗೆ ರಾಜ್ಯಸಭೆಯ ಸದಸ್ಯರಾಗಿ ಸೇವೆ ಸಲ್ಲಿಸಿದರು. ಏಪ್ರಿಲ್‌ನಲ್ಲಿ ರಾಜ್ಯಸಭೆಯಿಂದ ನಿವೃತ್ತರಾದರು.

ಏಕೈಕ ಅಲ್ಪಸಂಖ್ಯಾತ ಪ್ರಧಾನ ಮಂತ್ರಿ!

ಮನಮೋಹನ್ ಸಿಂಗ್‌ ಅವರು ಪಶ್ಚಿಮ್‌ ಪಂಜಾಬ್‌ನಲ್ಲಿ ಸೆಪ್ಟೆಂಬರ್ 26, 1932ರಂದು ಜನಿಸಿದರು. ಭಾರತೀಯ ಅರ್ಥಶಾಸ್ತ್ರಜ್ಞ ಮತ್ತು ರಾಜಕಾರಣಿಯಾಗಿ ಮನಮೋಹನ್ ಸಿಂಗ್‌ 2004ರಿಂದ 2014ರ ವರೆಗೆ ಭಾರತದ ಪ್ರಧಾನ ಮಂತ್ರಿಯಾಗಿ ಸೇವೆ ಸಲ್ಲಿಸಿದರು. ಏಕೈಕ ಅಲ್ಪಸಂಖ್ಯಾತರೊಬ್ಬರು ಅಂದ್ರೆ ಸಿಖ್‌ ಸಮುದಾಯದವರು ಪ್ರಧಾನಮಂತ್ರಿಯಾಗಿರೋ ಕೀರ್ತಿ ಮನಮೋಹನ್‌ ಸಿಂಗ್‌ ಅವರಿಗೆ ಸಲ್ಲುತ್ತದೆ.

ಆರ್‌‌ಬಿಐ ಗವರ್ನರ್‌ ಆಗಿದ್ದ ಮನಮೋಹನ್ ಸಿಂಗ್!

ಮನಮೋಹನ್‌ ಸಿಂಗ್ ಅವರು ಚಂಡೀಗಢದ ವಿಶ್ವವಿದ್ಯಾಲಯ ಮತ್ತು ಗ್ರೇಟ್‌ ಬ್ರಿಟನ್‌ ಕೇಂಬ್ರಿಡ್ಜ್‌ ವಿಶ್ವವಿದ್ಯಾಲಯದಲ್ಲಿ ವ್ಯಾಂಸಗ ಮಾಡಿದ್ರು. ನಂತರ ಅವರು ಆಕ್ಸ್‌ಫರ್ಡ್ ವಿಶ್ವವಿದ್ಯಾಲಯದಿಂದ ಅರ್ಥಶಾಸ್ತ್ರದಲ್ಲಿ ಡಾಕ್ಟರೇಟ್ ಪಡೆದರು. 1970 ರ ದಶಕದಲ್ಲಿ ಅವರು ಭಾರತ ಸರ್ಕಾರದ ಆರ್ಥಿಕ ಸಲಹಾ ಹುದ್ದೆಗಳ ಸರಣಿಗೆ ಹೆಸರುವಾಸಿಯಾಗಿದ್ದರು. ಮನಮೋಹನ್‌ ಸಿಂಗ್ ಭಾರತೀಯ ರಿಸರ್ವ್ ಬ್ಯಾಂಕ್ ನಿರ್ದೇಶಕರಾಗಿ (1976–80) ಹಾಗೂ ಆರ್‌‌ಬಿಐ ಗವರ್ನರ್ (1982–85) ಸೇವೆ ಸಲ್ಲಿಸಿದ್ದಾರೆ.

ಮೇ 2009 ರ ಸಂಸತ್ತಿನ ಚುನಾವಣೆಯಲ್ಲಿ ಎರಡನೇ ಬಾರಿ ಪ್ರಧಾನ ಮಂತ್ರಿಯಾದರು. 2014ರ ಲೋಕಾಸಭೆ ಚುನಾವಣೆಗೂ ಮುನ್ನ ನಾನು ಮೂರನೇ ಅವಧಿಗೆ ಪ್ರಧಾನ ಮಂತ್ರಿಯಾಗೋದಿಲ್ಲ ಅಂತ ಹೇಳಿದ್ದರಂತೆ.ಭಾರತದ ಆರ್ಥಿಕ ಸ್ಥಿತಿ ಕೂಡ, ಮನಮೋಹನ್ ಸಿಂಗ್‌ರ ಕಾಲದಲ್ಲಿ ಸಾಕಷ್ಟು ದೊಡ್ಡ ಸುಧಾರಣೆ ಕಂಡಿತ್ತು. ಆರ್ಥಿಕ ಚತುರ ಅಂತಲೇ ಎಲ್ಲರೂ ಕರೆಯುತ್ತಿದ್ದರು. ಆದರೆ ವಯೋಸಹಜ ಕಾಯಿಲೆಯಿಂದ ಮನಮೋಹನ್ ಸಿಂಗ್ ಕೊನೆಯುಸಿರೆಳೆದಿದ್ದಾರೆ.

Previous Post Next Post

AD

 


Contact For News&Ads

Siddi TV

Contact Form

f="https://unpkg.com/video.js/dist/video-js.css" rel="stylesheet">