Kampli : ಗೃಹ ಬಳಕೆಯ ಅನಿಲ ಸಿಲಿಂಡರ್‌ಗಳನ್ನು 5 ಕಿ.ಮೀ ಒಳಗೆ ಉಚಿತ ಸರಬರಾಜು


ಗೃಹ ಬಳಕೆಯ ಅನಿಲ ಸಿಲಿಂಡರ್‌ಗಳನ್ನು 5 ಕಿ.ಮೀ ಒಳಗೆ ಉಚಿತ ಸರಬರಾಜು

ಬಳ್ಳಾರಿ : ಜಿಲ್ಲೆಯಲ್ಲಿನ ಎಲ್ಲಾ ಅನಿಲ ವಿತರಕರು, ಗೃಹ ಬಳಕೆಯ ಭರ್ತಿ ಮಾಡಿದ ಅನಿಲ ಸಿಲಿಂಡರ್‌ಗಳನ್ನು ಗ್ರಾಹಕರಿಗೆ ಸಾಗಾಣಿಕೆ ಮಾಡುವಾಗ 5 ಕಿ.ಮೀ ಒಳಗೆ ಉಚಿತವಾಗಿ ಸರಬರಾಜು ಮಾಡಬೇಕು ಎಂದು ಆಹಾರ ನಾಗರಿಕ ಸರಬರಾಜು ಮತ್ತು ವ್ಯವಹಾರಗಳ ಇಲಾಖೆಗಳ ಉಪನಿರ್ದೇಶಕ ಸಕೀನಾ ಅವರು ತಿಳಿಸಿದ್ದಾರೆ.

5 ಕಿ.ಮೀ ನಂತರದ ಪ್ರತಿ ಕಿ.ಮೀ ರೌಂಡ್ ಟ್ರಿಪ್ ಗೆ ಪ್ರತಿ ಸಿಲಿಂಡರ್‌ಗೆ ರೂ.1.60 ತೆಗೆದುಕೊಳ್ಳಬೇಕು. ತಪ್ಪಿದ್ದಲ್ಲಿ ದ್ರವೀಕೃತ ಪೆಟ್ರೋಲಿಯಂ ಅನಿಲ (ಪೂರೈಕೆ ಮತ್ತು ವಿತರಣೆಯ ನಿಯಂತ್ರಣ) ಆದೇಶ 2000 ರ ರೀತ್ಯಾ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

-----------

Previous Post Next Post

AD

 


Contact For News&Ads

Siddi TV

Contact Form

f="https://unpkg.com/video.js/dist/video-js.css" rel="stylesheet">