ಕಂಪ್ಲಿ : ನಿನ್ನೆ ರಾತ್ರಿ ಎಂ.ಡಿ ಕ್ಯಾಂಪ್ ಬಳಿ ಬೈಕ್ ಮುಖಾಮುಖಿ ಡಿಕ್ಕಿ : ಗಂಭೀರ ಗಾಯ-Siddi TV
ಬಳ್ಳಾರಿ ಜಿಲ್ಲೆಯ ಕಂಪ್ಲಿ ತಾಲೂಕಿನ ಎಂ.ಡಿ ಕ್ಯಾಂಪ್ ಬಳಿ, ಬಳ್ಳಾರಿ ಹೋಗುವ ಪ್ರಮುಖ ರಸ್ತೆಯಲ್ಲಿ ನಿನ್ನೆ ರಾತ್ರಿ ಬೈಕ್ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರ ಪಿರ ಬಸಯ್ಯ ಎಂಬಾತನಿಗೆ ಗಂಭೀರ ಗಾಯವಾಗಿದ್ದು, ಇವರನ್ನು ಆಂಬುಲೆನ್ಸ್ ಮುಖಾಂತರ ಹೆಚ್ಚಿನ ಚಿಕಿತ್ಸೆಗಾಗಿ ಗಂಗಾವತಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಇನ್ನೊಬ್ಬ ಬೈಕ್ ಸವಾರನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಕಂಪ್ಲಿ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿದ್ದಾರೆ. ಸ್ಥಳಕ್ಕೆ ಕಂಪ್ಲಿ ಪೊಲೀಸ್ ಸಿಬ್ಬಂದಿಗಳು ಭೇಟಿ ನೀಡಿ, ಪ್ರಕರಣ ದಾಖಲಿಸಿದರು.
Tags
ಟಾಪ್ ನ್ಯೂಸ್