ಕಂಪ್ಲಿ: ಸ್ಪರ್ಶ ಕುಷ್ಠರೋಗ ಜಾಗೃತಿ ಆಂದೋಲನ – ಆರೋಗ್ಯ ಪ್ರತಿಜ್ಞೆ ಸ್ವೀಕಾರ
ಕಂಪ್ಲಿ ಪುರಸಭೆಯ ಮುಖ್ಯಾಧಿಕಾರಿ ದುರುಗಣ್ಣ ಅವರ ನೇತೃತ್ವದಲ್ಲಿ ಸ್ಪರ್ಶ ಕುಷ್ಠರೋಗ ಜಾಗೃತಿ ಆಂದೋಲನ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
ಈ ಸಂದರ್ಭದಲ್ಲಿ ಆರೋಗ್ಯ ಜಾಗೃತಿ ಮೂಡಿಸುವ ಪ್ರಮುಖ ಕಾರ್ಯಕ್ರಮಗಳು ಜರುಗಿದವು ಮತ್ತು ಕುಷ್ಠರೋಗ ನಿರ್ವಹಣೆಯ ಕುರಿತು ಪ್ರತಿಜ್ಞೆ ಸ್ವೀಕರಿಸಲಾಯಿತು.
ಕಾರ್ಯಕ್ರಮದಲ್ಲಿ ಪುರಸಭೆಯ ಸದಸ್ಯರು, ಅಧಿಕಾರಿಗಳು, ಸಿಬ್ಬಂದಿ ವರ್ಗದವರು ಹಾಗೂ ತಾಲೂಕಾ ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿಗಳಾದ ಪಿ. ಬಸವರಾಜ್, ಪ್ರಶಾಂತ್ ಎಂ. ಮತ್ತು ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಕೆ. ಶೋಭಾ ಭಾಗವಹಿಸಿದರು.
ಸಮುದಾಯ ಆರೋಗ್ಯ ಕೇಂದ್ರ, ಕಂಪ್ಲಿ ಇದರ ಸಹಭಾಗಿತ್ವದಲ್ಲಿ ಈ ಜಾಗೃತಿ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು.
Tags
ಟಾಪ್ ನ್ಯೂಸ್