ಹೊಲಿಗೆ ತರಬೇತಿಗಾಗಿ ಅರ್ಜಿ ಆಹ್ವಾನ
ಬಳ್ಳಾರಿ : ಜಿಪಂ ಗ್ರಾಮೀಣ ಕೈಗಾರಿಕೆ ಇಲಾಖೆ ವತಿಯಿಂದ ಪ್ರಸ್ತಕ ಸಾಲಿನ ಆರ್‌ಎಪಿ ಯೋಜನೆಯಡಿ ಗ್ರಾಮೀಣ ಭಾಗದ ಮಹಿಳಾ ಅಭ್ಯರ್ಥಿಗಳಿಂದ ಹೊಲಿಗೆ ತರಬೇತಿಗಾಗಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ಜಿಪಂ ಗ್ರಾಮೀಣ ಕೈಗಾರಿಕೆ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.
26 ಸಾಮಾನ್ಯ ವರ್ಗದ ಮತ್ತು ವಿಶೇಷ ಘಟಕ ಯೋಜನೆಯಡಿ 04 ಸೇರಿ ಒಟ್ಟು 30 ಮಹಿಳಾ ಅಭ್ಯರ್ಥಿಗಳಿಗೆ ತರಬೇತಿ ನೀಡಲು ಉದ್ದೇಶಿಸಲಾಗಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಸಿಂಡ್ ಗ್ರಾಮೀಣ ತರಬೇತಿ ಸಂಸ್ಥೆಯಿAದ ಒಂದು ತಿಂಗಳ ಉಚಿತ ವಸತಿಯೊಂದಿಗೆ ಶಿಷ್ಯವೇತನ ರಹಿತ ತರಬೇತಿ ನೀಡಲಾಗುವುದು. ಯಶಸ್ವಿಯಾಗಿ ತರಬೇತಿ ಪೂರ್ಣಗೊಳಿಸಿದ ಮಹಿಳಾ ಅಭ್ಯರ್ಥಿಗಳಿಗೆ ಉಚಿತ ವಿದ್ಯುತ್ ಚಾಲಿತ ಹೊಲಿಗೆ ಯಂತ್ರ ವಿತರಿಸಲಾಗುವುದು.
ಅರ್ಜಿ ಸಲ್ಲಿಸಲು ವೆಬ್‌ಸೈಟ್ ballari.nic.in ವಿಳಾಸಕ್ಕೆ ಭೇಟಿ ನೀಡಬೇಕು. ಅರ್ಜಿ ಸಲ್ಲಿಸಲು ಜ.22 ಕೊನೆಯ ದಿನವಾಗಿರುತ್ತದೆ.
ಹೆಚ್ಚಿನ ಮಾಹಿತಿಗಾಗಿ ಆಯಾ ತಾಲ್ಲೂಕಿನ ಕೈಗಾರಿಕಾ ವಿಸ್ತರಣಾಧಿಕಾರಿಗಳ ಬಳ್ಳಾರಿ-ಮೊ.9035547140, ಸಂಡೂರು-ಮೊ.9844200579, ಜಿಪಂ ಗ್ರಾಮೀಣ ಕೈಗಾರಿಕೆ ಇಲಾಖೆಯ ಉಪನಿರ್ದೇಶಕರ ಮೊ.9901313417 ಗೆ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
-----------