Kampli : ಕಂಪ್ಲಿಯಲ್ಲಿ 2ನೇ ದಿನಕ್ಕೆ ಕಾಲಿಟ್ಟ ಗ್ರಾಮ ಆಡಳಿತ ಅಧಿಕಾರಿಗಳ ಮುಷ್ಕರ


ಕಂಪ್ಲಿಯಲ್ಲಿ 2ನೇ ದಿನಕ್ಕೆ ಕಾಲಿಟ್ಟ ಗ್ರಾಮ ಆಡಳಿತ ಅಧಿಕಾರಿಗಳ ಮುಷ್ಕರ

ತಹಶೀಲ್ದಾರ್ ಕಚೇರಿ ಎದುರು ಧರಣಿ, ಬೇಡಿಕೆ ಈಡೇರಿಕೆಗಾಗಿ ಒತ್ತಾಯ

ಕಂಪ್ಲಿ: ಗ್ರಾಮ ಆಡಳಿತ ಅಧಿಕಾರಿಗಳು ರಾಜ್ಯದಾದ್ಯಂತ ಆರಂಭಿಸಿರುವ ಅನಿರ್ದಿಷ್ಟಾವಧಿ ಮುಷ್ಕರದ ಅಂಗವಾಗಿ, ಕಂಪ್ಲಿ ತಾಲ್ಲೂಕಿನ ತಹಶೀಲ್ದಾರ್ ಕಚೇರಿ ಎದುರು ಇಂದು ಮುಷ್ಕರ ಎರಡನೇ ದಿನಕ್ಕೆ ಕಾಲಿಟ್ಟಿದೆ. ಅಧಿಕಾರಿಗಳು ತಮ್ಮ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಧರಣಿ ನಡೆಸುತ್ತಿದ್ದಾರೆ.


ಮುಷ್ಕರದ ಪ್ರಮುಖ ಬೇಡಿಕೆಗಳು:

ಸುಸಜ್ಜಿತ ಕಚೇರಿ, ಪೀಠೋಪಕರಣ ಮತ್ತು ತಾಂತ್ರಿಕ ಸೌಲಭ್ಯ (ಮೊಬೈಲ್, ಲ್ಯಾಪ್‌ಟಾಪ್, ಪ್ರಿಂಟರ್, ಸ್ಕ್ಯಾನರ್) ಒದಗಿಸುವುದು.

ಸೇವಾ ಭದ್ರತೆ ಮತ್ತು ಮೌಲ್ಯಮಾಪನದಲ್ಲಿ ನ್ಯಾಯೋಚಿತ ತಂತ್ರ ಅನುಸರಿಸುವುದು.

ಅನ್ಯಾಯವಾಗಿ ನೀಡಲಾದ ಮೆಮೋಗಳನ್ನು ರದ್ದುಪಡಿಸುವುದು.

ಸರ್ಕಾರಿ ರಜಾ ದಿನಗಳಲ್ಲೂ ಕರ್ತವ್ಯ ನಿರ್ವಹಿಸುವ ಒತ್ತಡ ಕಡಿಮೆ ಮಾಡುವುದು.

ತಹಶೀಲ್ದಾರ್ ಕಚೇರಿ ಎದುರು ಸೇರಿದ್ದ ಗ್ರಾಮ ಆಡಳಿತ ಅಧಿಕಾರಿಗಳು, "ನಮ್ಮ ಬೇಡಿಕೆಗಳು ಈಡೇರದಿದ್ದರೆ ಮುಷ್ಕರ ಮುಂದುವರೆಯಲಿದೆ" ಎಂದು ಎಚ್ಚರಿಕೆ ನೀಡಿದರು. ಮುಷ್ಕರದಿಂದ ತಹಸೀಲ್ದಾರ್ ಕಚೇರಿಯಲ್ಲಿ ಸಾರ್ವಜನಿಕ ಸೇವೆಗಳ ಮೇಲೆ ಪರಿಣಾಮ ಬಿದ್ದಿದ್ದು, ಆದಾಯ, ಜಾತಿ, ವಂಶಾವಳಿ ಪ್ರಮಾಣಪತ್ರಗಳ ಜಾರಿಯಲ್ಲಿ ವಿಳಂಬ ಉಂಟಾಗಿದೆ.

ಸರ್ಕಾರ ಈ ಬಗ್ಗೆ ಸೂಕ್ತ ನಿರ್ಧಾರ ಕೈಗೊಂಡು, ಗ್ರಾಮ ಆಡಳಿತ ಅಧಿಕಾರಿಗಳ ಬೇಡಿಕೆಗಳನ್ನು ಈಡೇರಿಸಬೇಕೆಂದು ಮುಷ್ಕರದಲ್ಲಿ ಭಾಗವಹಿಸಿದವರು ಒತ್ತಾಯಿಸಿದರು.

Previous Post Next Post

AD

 


Contact For News&Ads

Siddi TV

Contact Form

f="https://unpkg.com/video.js/dist/video-js.css" rel="stylesheet">