ಬಂಧಿತ SDPI ರಾಷ್ಟ್ರೀಯ ಅಧ್ಯಕ್ಷ ಎಂ.ಕೆ. ಫೈಝಿ ಬಿಡುಗಡೆಗೆ ಆಗ್ರಹಿಸಿ SDPI ಕಾರ್ಯಕರ್ತರಿಂದ ಪ್ರತಿಭಟನೆ
ಕಂಪ್ಲಿ: SDPI ರಾಷ್ಟ್ರೀಯ ಅಧ್ಯಕ್ಷ ಎಂ.ಕೆ. ಫೈಝಿ ಅವರನ್ನು ಅಕ್ರಮವಾಗಿ ಬಂಧಿಸಲಾಗಿದ್ದು, ಈ ಕೂಡಲೇ ಅವರನ್ನು ಬಿಡುಗಡೆ ಮಾಡಬೇಕೆಂದು ಕಂಪ್ಲಿ SDPI ವತಿಯಿಂದ ತೀವ್ರ ಪ್ರತಿಭಟನೆ ನಡೆಸಲಾಯಿತು. ನಗರದ ಅಂಬೇಡ್ಕರ್ ಸರ್ಕಲ್‌ನಲ್ಲಿ ನಡೆದ ಈ ಪ್ರತಿಭಟನೆಯಲ್ಲಿ ಹಲವಾರು ಕಾರ್ಯಕರ್ತರು ಭಾಗವಹಿಸಿ, ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.
ಈ ಸಂದರ್ಭ SDPI ಕಂಪ್ಲಿ ಅಧ್ಯಕ್ಷ ರಫೀಕ್, ಉಪಾಧ್ಯಕ್ಷ ಇಮ್ರಾನ್ ಖಾನ್, ಕಾರ್ಯದರ್ಶಿ ದೌಲ್ ಖಾನ್ ಸೇರಿದಂತೆ ಹಲವು ನಾಯಕರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು. ಪ್ರತಿಭಟನಾಕಾರರು ಎಂ.ಕೆ. ಫೈಝಿ ಅವರ ಬಂಧನವನ್ನು ಪ್ರಜಾಪ್ರಭುತ್ವದ ವಿರುದ್ಧದ ಕೃತ್ಯವೆಂದು ಖಂಡಿಸಿದರು ಹಾಗೂ ತಕ್ಷಣವೇ ಅವರ ಬಿಡುಗಡೆಗೆ ಒತ್ತಾಯಿಸಿದರು.
ಪ್ರತಿಭಟನೆಯ ವೇಳೆ ಮಾತನಾಡಿದ SDPI ಸದಸ್ಯರು, "ನ್ಯಾಯಕ್ಕಾಗಿ ಹೋರಾಡುವ ವ್ಯಕ್ತಿಗಳನ್ನು ದಮನಿಸಲು ಸರ್ಕಾರ ಪ್ರಯತ್ನಿಸುತ್ತಿದೆ. ಇದು ಸ್ವಾತಂತ್ರ್ಯ ಮತ್ತು ನ್ಯಾಯದ ವಿರುದ್ಧವಾದ ಕೃತ್ಯ" ಎಂದು ವಕ್ತವ್ಯ ನೀಡಿದರು.