Kampli : ವಿಶ್ವ ಬಾಯಿಯ ಆರೋಗ್ಯ ದಿನ ಅಂಗವಾಗಿ ಜಾಗೃತಿ ಹಾಗೂ ತಪಾಸಣೆ ಕಾರ್ಯಕ್ರಮ


ವಿಶ್ವ ಬಾಯಿಯ ಆರೋಗ್ಯ ದಿನಾಚರಣೆ:

 ಸಮುದಾಯ ಆರೋಗ್ಯ ಕೇಂದ್ರದಲ್ಲಿ ಜಾಗೃತಿ ಮತ್ತು ದಂತ ತಪಾಸಣೆ ಕಾರ್ಯಕ್ರಮ

ಕಂಪ್ಲಿ, ಮಾರ್ಚ್ 20: ವಿಶ್ವ ಬಾಯಿಯ ಆರೋಗ್ಯ ದಿನಾಚರಣೆ ಅಂಗವಾಗಿ ಸಮುದಾಯ ಆರೋಗ್ಯ ಕೇಂದ್ರ ಕಂಪ್ಲಿಯಲ್ಲಿ ವಿಶೇಷ ಜಾಗೃತಿ ಮತ್ತು ದಂತ ತಪಾಸಣೆ ಹಾಗೂ ಚಿಕಿತ್ಸೆ ಕಾರ್ಯಕ್ರಮ ಆಯೋಜಿಸಲಾಯಿತು.

ಕಾರ್ಯಕ್ರಮಕ್ಕೆ ಆಡಳಿತ ವೈದ್ಯಾಧಿಕಾರಿ ಡಾ. ರವೀಂದ್ರ ಕನಕೇರಿ ಸಸಿಗೆ ನೀರು ಹಾಕುವ ಮೂಲಕ ಚಾಲನೆ ನೀಡಿದರು. ಅವರು ಬಾಯಿಯ ಆರೋಗ್ಯದ ಮಹತ್ವದ ಬಗ್ಗೆ ಮಾತನಾಡಿ, ಸರಿಯಾದ ಆಹಾರ ಪದ್ಧತಿ ಮತ್ತು ಶುದ್ಧತೆ ಪಾಲನೆಯ ಅಗತ್ಯವನ್ನು ಹೇಳಿದರು.

ಡಾ. ಶ್ರೀನಿವಾಸ್ ರಾವ್ ಅವರು ದಂತ ಆರೋಗ್ಯದ ಪ್ರಾಮುಖ್ಯತೆ, ತಪಾಸಣೆ ಮತ್ತು ಚಿಕಿತ್ಸೆ ಕುರಿತು ಸಾರ್ವಜನಿಕರಿಗೆ ಮಾಹಿತಿ ನೀಡಿದರು. ಹಲವಾರು ಸಾರ್ವಜನಿಕರು ಈ ಆರೋಗ್ಯ ತಪಾಸಣೆಯ ಪ್ರಯೋಜನ ಪಡೆದುಕೊಂಡರು.

ಕಾರ್ಯಕ್ರಮದಲ್ಲಿ ವೈದ್ಯಾಧಿಕಾರಿಗಳು, BHO, ಹಾಗೂ ಆರೋಗ್ಯ ಸಿಬ್ಬಂದಿ ವರ್ಗದವರು ಭಾಗವಹಿಸಿ, ಸಮುದಾಯದಲ್ಲಿ ಆರೋಗ್ಯ ಜಾಗೃತಿಯನ್ನು ಹೆಚ್ಚಿಸುವ ಕಾರ್ಯಕ್ಕೆ ತಮ್ಮ ಸಹಕಾರ ನೀಡಿದರು.

Previous Post Next Post

AD

 


Contact For News&Ads

Siddi TV

Contact Form

f="https://unpkg.com/video.js/dist/video-js.css" rel="stylesheet">