ಕಂಪ್ಲಿ ತಾಲ್ಲೂಕು ಕಛೇರಿಯಲ್ಲಿ ಶ್ರೀ ಅಗ್ನಿ ಬನ್ನಿರಾಯ ಜಯಂತಿ ಆಚರಣೆ
ಕಂಪ್ಲಿ: ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಇಂದು ಶ್ರೀ ಅಗ್ನಿ ಬನ್ನಿರಾಯ ಜಯಂತಿಯನ್ನು ಆಚರಿಸಲಾಯಿತು.
ಶ್ರೀ ಅಗ್ನಿ ಬನ್ನಿರಾಯ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ನಮನ ಸಲ್ಲಿಸಲಾಯಿತು.ಗಣ್ಯರು ಅವರ ತತ್ವ, ಆದರ್ಶ ಮತ್ತು ಸಮಾಜದಲ್ಲಿ ಅವರ ಕೊಡುಗೆ ಬಗ್ಗೆ ಮಾತನಾಡಿದರು.ಸಮಾಜದ ಏಳಿಗೆಗೆ ಬನ್ನಿರಾಯ ಅವರ ತತ್ವಗಳನ್ನು ಅನುಸರಿಸುವ ಪ್ರತಿಜ್ಞೆ ತೆಗೆದುಕೊಳ್ಳಲಾಯಿತು.
ಕಾರ್ಯಕ್ರಮದಲ್ಲಿ ಭಾಗಿಯಾದವರು ಶ್ರೀ ಅಗ್ನಿ ಬನ್ನಿರಾಯರ ತತ್ವಗಳನ್ನು ಪಾಲಿಸಬೇಕು ಎಂಬ ಮನೋಭಾವವನ್ನು ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ತಾಲ್ಲೂಕು ಆಡಳಿತ, ಜನಪ್ರತಿನಿಧಿಗಳು, ಮತ್ತು ವಿವಿಧ ಸಂಘ-ಸಂಸ್ಥೆಗಳ ಪ್ರತಿನಿಧಿಗಳು ಭಾಗವಹಿಸಿದರು.