ಕಂಪ್ಲಿ: ಇಂದು ಬೆಳಗ್ಗೆ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಪ್ರಗತಿ ಪರಿಶೀಲನಾ ಸಭೆ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ನಡೆಯಿತು. ಈ ಸಭೆಗೆ ಅಧ್ಯಕ್ಷತೆ ವಹಿಸಿದ್ದ ಶ್ರೀನಿವಾಸರಾವ್ ಅವರು ಗ್ಯಾರಂಟಿ ಯೋಜನೆಗಳ ಪ್ರಗತಿ, ತಾಂತ್ರಿಕ ಸವಾಲುಗಳು ಮತ್ತು ಜನತೆಗೆ ಉಂಟಾಗುತ್ತಿರುವ ಸಮಸ್ಯೆಗಳ ಕುರಿತು ಚರ್ಚೆ ನಡೆಸಿದರು.
ಸಭೆಯಲ್ಲಿ 5 ಪ್ರಮುಖ ಗ್ಯಾರಂಟಿ ಯೋಜನೆಗಳ ಕುರಿತು ವಿಶ್ಲೇಷಣೆ ನಡೆಸಲಾಯಿತು. ಈ ಯೋಜನೆಗಳ ಪರಿಣಾಮಕಾರಿತ್ವ ಹೆಚ್ಚಿಸುವ ನಿಟ್ಟಿನಲ್ಲಿ ಮತ್ತು ಜನರಿಗೆ ಹೆಚ್ಚು ಅನುಕೂಲವಾಗುವ ರೀತಿಯಲ್ಲಿ ಅನುಷ್ಠಾನ ಮಾಡಲು ಹಲವಾರು ಸಲಹೆಗಳು ಮುಂದಿಡಲಾಯಿತು. ಅದೇ ರೀತಿ, ಪಂಚ ಯೋಜನೆಗಳ ಅಭಿವೃದ್ಧಿ ಕುರಿತು ತೀರ್ಮಾನಿಸಲಾಗಿದ್ದು, ಅಧಿಕಾರಿಗಳು ಮತ್ತು ಸುದ್ದಿಗಾರರೊಂದಿಗೆ ಚರ್ಚೆ ನಡೆಸಿ ಅಗತ್ಯ ತೀರ್ಮಾನಗಳನ್ನು ಕೈಗೊಳ್ಳಲಾಯಿತು.
ಸಮಿತಿ ಅಧ್ಯಕ್ಷರು ಮತ್ತು ಅಧಿಕಾರಿಗಳು ಈ ಯೋಜನೆಗಳ ಪರಿಣಾಮಕಾರಿ ಜಾರಿಗೆ ಕ್ರಮ ಕೈಗೊಳ್ಳಲು ಭರವಸೆ ನೀಡಿದ್ದು, ನಾಗರಿಕರು ಇದರ ಲಾಭ ಪಡೆಯುವಂತೆ ನಿರ್ವಹಿಸುವುದಾಗಿ ಹೇಳಿದರು.