ಕರ್ನಾಟಕ ರಾಜ್ಯ ಬಿಜೆಪಿ ಯುವ ಮುಖಂಡ ಹಾಗೂ ಜಿಲ್ಲಾ ಪಂಚಾಯಿತಿ ಬಿಜೆಪಿ ಟಿಕೆಟ್ ಆಕಾಂಕ್ಷಿಯೂ ಆಗಿರುವ ದೇವು ನಾಯಕನ ಮೇಲೆ 7 ವರ್ಷದ ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರ ಮಾಡಿದ ಆರೋಪ ಕೇಳಿಬಂದಿದೆ. ತಮ್ಮದೇ ಗ್ರಾಮದ 7 ವರ್ಷದ ಬಾಲಕಿಯ ಕಣ್ಣಿಗೆ ಬಟ್ಟೆ ಕಟ್ಟಿ, ಬಾಯಿ ಮುಚ್ಚಿ ಎಳೆದುಕೊಂಡು ಹೋಗಿ ಅತ್ಯಾಚಾರ ಮಾಡಿದ್ದಾನೆ ಎಂದು ದೂರು ದಾಖಲಾಗಿದೆ.
ಈ ಘಟನೆ ಬಳ್ಳಾರಿ ಜಿಲ್ಲೆಯ ಸಿರಗುಪ್ಪ ತಾಲೂಕಿನ ಗ್ರಾಮವೊಂದರಲ್ಲಿ ನಡೆದಿದೆ. ಬಿಜೆಪಿ ಯುವ ಮುಖಂಡ ದೇವು ನಾಯಕ ಎನ್ನುವಾತನಿಂದ ಕೃತ್ಯ ನಡೆದಿದೆ ಎಂಬ ಆರೋಪ ಕೇಳಿಬಂದಿದೆ. 7 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಮಾಡಿದ್ದಾನೆ ಎಂದು ಗ್ರಾಮಸ್ಥರು ಹೇಳುತ್ತಿದ್ದಾರೆ. ಬೀದಿಯಲ್ಲಿ ಆಟವಾಡುತ್ತಿದ್ದ ಅಪ್ರಾಪ್ತ ಬಾಲಕಿಯ ಕಣ್ಣಿಗೆ ಬಟ್ಟೆ ಕಟ್ಟಿ ನಂಗತರ ಆಕೆಯ ಬಾಯಿ ಮುಚ್ಚಿ ನಿರ್ಜನ ಪ್ರದೇಶಕ್ಕೆ ಎಳೆದೊಯ್ದು ಅತ್ಯಾಚಾರ ಮಾಡಿದ್ದಾನೆ ಎಂಬ ಆರೋಪ ಕೇಳಿಬಂದಿದೆ. ಇನ್ನು ಈ ಕಿಡಿಗೇಡಿಯ ಕೃತ್ಯಕ್ಕೆ ಓರ್ವ ಮಹಿಳೆಯ ಕೂಡ ಸಾಥ್ ನಿಡಿದ್ದಾರೆ ಎಂದು ಹೇಳಲಾಗುತ್ತಿದೆ.
ಬಳ್ಳಾರಿ ಜಿಲ್ಲೆಯ ಮುಂಬರುವ ಸ್ಥಳೀಯ ಚುನಾವಣೆಯಲ್ಲಿ ಆರೋಪಿ ದೇವು ನಾಯಕ ಬಿಜೆಪಿ ಟಿಕೆಟ್ ಆಕಾಂಕ್ಷಿ ಆಗಿದ್ದಾನೆ. ಈ ಬಗ್ಗೆ ರಾಜ್ಯದ ಹಿರಿಯ ನಾಯಕರನ್ನು ಸಂಪರ್ಕ ಮಾಡಿ ಟಿಕೆಟ್‌ಗಾಗಿ ಭಾರೀ ಲಾಬಿ ನಡೆಸುತ್ತಿದ್ದನು. ಜೊತೆಗೆ, ಬಿಜೆಪಿ ಸೋಷಿಯಲ್ ಮೀಡಿಯಾ ಹ್ಯಾಂಡಲ್ ಮಾಡುತ್ತಿದ್ದಾರೆ. ಆರೋಪಿ ದೇವು ನಾಯಕ ತನ್ನ ಸಾಮಾಜಿಕ ಜಾಲತಾಣದಲ್ಲಿ ರಾಜ್ಯ ಹಾಗೂ ರಾಷ್ಟ್ರೀಯ ಮುಖಂಡರ ಜೊತೆಗೆ ಇರೋ ಪೋಟೋ ಹಂಚಿಕೊಂಡಿದ್ದು, ತಾನೊಬ್ಬ ದೊಡ್ಡ ನಾಯಕ ಎಂದು ಬಿಂಬಿಸಿಕೊಳ್ಳುತ್ತಿದ್ದನು
ಇನ್ನು ಘಟನೆಯ ಬೆನ್ನಲ್ಲಿಯೇ ಸಂತ್ರಸ್ತ ಬಾಲಕಿಯ ಕುಟುಂಬಸ್ಥರು ಸಿರಿಗೇರಿ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ ದಾಖಲಾದ ಬೆನ್ನಲ್ಲಿಯೇ ಸಿರಿಗೇರಿ ಠಾಣೆ ಪೊಲೀಸರು ಬಿಜೆಪಿ ಮುಖಂಡನನ್ನು ವಶಕ್ಕೆ ಪಡೆದಿದ್ದು, ವಿಚಾರಣೆ ನಡೆಸುತ್ತಿದ್ದಾರೆ. ಜೊತೆಗೆ, ಬಾಲಕಿಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿ ತನಿಖೆ ಮುಂದುವರೆಸಿದ್ದಾರೆ.