ಭಯೋತ್ಪಾದಕ ದಾಳಿಯನ್ನು ಖಂಡಿಸಿ ಸ್ಲೋಕಾಚಾರಣಾ ಕಾರ್ಯಕ್ರಮ
ಕಂಪ್ಲಿ: ಎಸ್.ಡಿ.ಪಿ.ಐ ವತಿಯಿಂದ ಶ್ರದ್ಧಾಂಜಲಿ
ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನ ಬೈಸರನ್ ಕಣಿವೆಯಲ್ಲಿ ಏಪ್ರಿಲ್ 22ರಂದು ನಡೆದ ಭಯೋತ್ಪಾದಕ ದಾಳಿಯನ್ನು ಖಂಡಿಸಿ ಮತ್ತು ಈ ದಾಳಿಯಲ್ಲಿ ಬಲಿಯಾದವರಿಗೆ ಶ್ರದ್ಧಾಂಜಲಿ ಸಲ್ಲಿಸಲು ಕಂಪ್ಲಿ ವಿಧಾನಸಭಾ ಕ್ಷೇತ್ರದ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್.ಡಿ.ಪಿ.ಐ) ವತಿಯಿಂದ ಇಂದು ನಗರದ ಡಾ. ಬಿ.ಆರ್. ಅಂಬೇಡ್ಕರ್ ವೃತ್ತದಲ್ಲಿ ಸ್ಲೋಕಾಚಾರಣಾ ಕಾರ್ಯಕ್ರಮ ಮಾಡಲಾಯಿತು.
ಈ ಕಾರ್ಯಕ್ರಮದಲ್ಲಿ ದೌರ್ಜನ್ಯವನ್ನು ಖಂಡಿಸಿ, ಶಾಂತಿಯುತ ಮತ್ತು ಸಮಗ್ರ ಸಮಾಜದ ಪರವಾಗಿ ಬಲವಾದ ಸಂದೇಶ ನೀಡುವ ಉದ್ದೇಶವಿದೆ ಎಂದು ಎಸ್.ಡಿ.ಪಿ.ಐ ಅಧ್ಯಕ್ಷ ರಫೀಕ್ ತಿಳಿಸಿದ್ದಾರೆ. ಕಾರ್ಯಕ್ರಮಕ್ಕೆ ಸಾರ್ವಜನಿಕರ ಸಹಭಾಗಿತ್ವವೂ ನಿರೀಕ್ಷಿಸಲಾಗಿದೆ. ಸ್ಥಳೀಯ ಆಡಳಿತ ಮತ್ತು ಪೊಲೀಸ್ ಇಲಾಖೆಗೆ ಬಂದೋಬಸ್ತ್ ನೀಡುವಂತೆ ಮನವಿ ಸಲ್ಲಿಸಲಾಗಿದೆ.