Kampli : ಭಾರತರತ್ನ ಡಾ.ಬಿ.ಆರ್ ಅಂಬೇಡ್ಕರ್ ಸಂಘದಿಂದ ಭೀಮಾ ಜಯಂತಿ ಆಚರಣೆ

AD

 



ಭಾರತರತ್ನ ಡಾ.ಬಿ.ಆರ್ ಅಂಬೇಡ್ಕರ್ ಸಂಘದಿಂದ ಭೀಮಾ ಜಯಂತಿ ಆಚರಣೆ

ಕಂಪ್ಲಿ: 4ನೇ ವಾರ್ಡ್‌ನ ಅಂಬೇಡ್ಕರ್ ನಗರದಲ್ಲಿರುವ ಕೆಂಚಮ್ಮ ದೇವಿ ದೇವಸ್ಥಾನದ ಬಳಿ ಭಾರತರತ್ನ ಡಾ.ಬಿ.ಆರ್ ಅಂಬೇಡ್ಕರ್ ಸಂಘದ ವತಿಯಿಂದ ಡಾ.ಅಂಬೇಡ್ಕರ್ ಅವರ 134ನೇ ಜಯಂತಿಯನ್ನು ಭಾವಪೂರ್ಣವಾಗಿ ಆಚರಿಸಲಾಯಿತು.

ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸುವ ಮೂಲಕ ಜಯಂತಿಗೆ ಚಾಲನೆ ನೀಡಲಾಯಿತು.

ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಎಸ್. ರುದ್ರಮುನಿ ಮಾತನಾಡಿ, "ಅಂಬೇಡ್ಕರ್ ಅವರ ಆದರ್ಶಗಳು ಹಾಗೂ ತತ್ವಗಳು ನಮ್ಮ ಜೀವನದ ಪಥದೀಪವಾಗಬೇಕು. ವಿಶೇಷವಾಗಿ ಯುವಕರು ಅವರ ಕೊಡುಗೆಗಳನ್ನು ಗುರುತಿಸಿ, ಅವರು ಹಾಕಿಕೊಟ್ಟಿರುವ ಸಂವಿಧಾನದ ಮಾರ್ಗದಲ್ಲಿ ನಡೆಬೇಕು," ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಸಂಘದ ಗೌರವಾಧ್ಯಕ್ಷ ಹುಲುಗಪ್ಪ, ಪ್ರಧಾನ ಕಾರ್ಯದರ್ಶಿ ಹೊನ್ನೂರಪ್ಪ, ಉಪಾಧ್ಯಕ್ಷರಾದ ಕೃಷ್ಣ, ಮಾರುತಿ, ವಿಜಯ, ತಿಪ್ಪೇಸ್ವಾಮಿ ಸೇರಿದಂತೆ ಹಲವರು ಭಾಗವಹಿಸಿದ್ದರು. ಸಾರ್ವಜನಿಕರ ಉಪಸ್ಥಿತಿ ಕಾರ್ಯಕ್ರಮಕ್ಕೆ ಹೆಚ್ಚು ಉಜ್ವಲತೆ ನೀಡಿತು.

Contact For News&Ads

Siddi TV
Previous Post Next Post

Contact Form

f="https://unpkg.com/video.js/dist/video-js.css" rel="stylesheet">