ಕಂಪ್ಲಿಯಲ್ಲಿ ವರ್ಷದ ಮೊದಲ ಮಳೆ
ಬಳ್ಳಾರಿ ಜಿಲ್ಲೆಯ ಕಂಪ್ಲಿಯಲ್ಲಿ ವರ್ಷದ ಮೊದಲ ಮಳೆಯಾಗಿದ್ದು, ಬಿಸಿಲ ಧಗೆಯಿಂದ ಬೇಸತ್ತ ಜನರಿಗೆ ನೆಮ್ಮದಿ ತಂದಿದೆ. ರಾಜ್ಯ ಹವಾಮಾನ ಇಲಾಖೆ ಇಂದು ಸಾಧಾರಣ ಮಳೆಯ ಮುನ್ಸೂಚನೆ ನೀಡಿದೆ. ಕಂಪ್ಲಿ ತಾಲೂಕಿನ ಹಲವೆಡೆ ಮಳೆಯಾಗಿದೆ.ನಾಳೆ ಮತ್ತೆ ಒಣ ಹವಾಮಾನ ಇರಲಿದೆ.
ಬಿಸಿಲ ಧಗೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಸಂದರ್ಭದಲ್ಲಿ ಇಂದು ಕಂಪ್ಲಿಯಲ್ಲಿ ವರ್ಷದ ಮೊದಲ ಮಳೆಯ ಸಿಂಚನವಾಗಿದೆ. ಬಿಸಿಲ ಧಗೆಗೆ ಬೇಸತ್ತು ಹೋಗಿದ್ದ ಕಂಪ್ಲಿ ಮಂದಿಗೆ ಮಳೆರಾಯ ತಂಪೆರೆದಿದ್ದ.ಇಂದು ಒಂದೇ ದಿನ ಸಾಧಾರಣ ಪ್ರಮಾಣದಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ರಾಜ್ಯ ಹವಮಾನ ಇಲಾಖೆ ಮೂನ್ಸಚನೆ ನೀಡಿದೆ.