SSLC: ಮೇ ಎರಡನೇ ವಾರ ಫಲಿತಾಂಶ ಪ್ರಕಟಣೆ ಸಾಧ್ಯತೆ.!
ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ನಡೆಸುವ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಮೌಲ್ಯಮಾಪನ ಮಂಗಳವಾರದಿಂದ ಆರಂಭಗೊಂಡಿದೆ. ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಮೌಲ್ಯಮಾಪನ ನಡೆಯುತ್ತಿದ್ದು, 35 ಜಿಲ್ಲೆಗಳ ಸರಕಾರಿ ಮತ್ತು ಅನುದಾನಿತ ಶಾಲೆಗಳ ಶಿಕ್ಷಕರು ಬಾಗವಹಿಸುತ್ತಿದ್ದು, ಮೇ 2ನೇ ವಾರದಲ್ಲಿ ಫಲಿತಾಂಶ ಪ್ರಕಟವಾಗುವ ಸಾಧ್ಯತೆಗಳಿವೆ.
ಫಲಿತಾಂಶ ಪ್ರಕಟವಾದ ನಂತರ ವಿದ್ಯಾರ್ಥಿಗಳು ಮರುಮೌಲ್ಯಮಾಪನ/ಮರುಪರಿಶೀಲನೆ ಪ್ರಕ್ರಿಯೆಗೆ ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳು ಕೊನೆಯ ದಿನಾಂಕದ ಮೊದಲು ಮಂಡಳಿಯ ಅರ್ಜಿ ನಮೂನೆಯನ್ನು ಆನ್ ಲೈನ್ ಅಥವಾ ಆಫ್ ಲೈನ್ ಮೋಡ್‌ನಲ್ಲಿ ಅಗತ್ಯ ಶುಲ್ಕದೊಂದಿಗೆ ಸಲ್ಲಿಸಬಹುದು.
ಪರೀಕ್ಷೆ-1 ರಲ್ಲಿ ವಿದ್ಯಾರ್ಥಿಗಳು ಉತ್ತೀರ್ಣರಾಗದಿದ್ದರೆ ಅಥವಾ ಉತ್ತಮ ಅಂಕಗಳು ಬರದಿದ್ದರೆ ಪರೀಕ್ಷೆ- 2 ಮತ್ತು 3ರನ್ನು ಬರೆದು ಉತ್ತೀರ್ಣರಾಗಲು ಅವಕಾಶ ನೀಡಲಾಗಿದೆ. ಈ ಪರೀಕ್ಷೆಗಳು ಜೂನ್ ಮತ್ತು ಜುಲೈ ತಿಂಗಳಲ್ಲಿ ನಡೆಯಲಿವೆ.